ಇಂದು ಅಂಬೇಡ್ಕರ್ ಭವನ ಉದ್ಘಾಟನೆ
ತುಮಕೂರು: ತುಮಕೂರಿನ ದೇವರಾಯಪಟ್ಟಣದ ವಾರ್ಡ್ ನಂ. 35 ರಲ್ಲಿ ಜ. 30 ರಂದು ಸಂಜೆ 4 ಗಂಟೆಗೆ ಡಾ.ಬಿ.ಆರ್. ಅಂಬೇಡ್ಕರ್ ಭವನ ನೂತನ ಕಟ್ಟಡ, ಭವನದ ಕಾಂಪೌಂಡ್ ಹಾಗೂ ಬಸ್ ತಂಗುದಾಣ ಉದ್ಘಾಟನಾ ಸಮಾರಂಭ ಏರ್ಪಾಟಾಗಿದೆ.
ಸಮಾರಂಭವನ್ನು ಸಂಸದ ಜಿ.ಎಸ್. ಬಸವರಾಜ್ ಉದ್ಘಾಟಿಸಲಿದ್ದಾರೆ. ಅಂಬೇಡ್ಕರ್ ಭವನದ ಕಾಂಪೌಂಡ್ ಉದ್ಘಾಟನೆಯನ್ನು ಪ್ರಭಾರ ಅಧ್ಯಕ್ಷ ಅಸ್ಲಾಂಪಾಷಾ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಡಾ.ಎಂ.ಆರ್. ಹುಲಿನಾಯ್ಕರ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ನಯಾಜ್, ನಗರಸಭಾ ಸದಸ್ಯ ಮುನಿಯಪ್ಪ, ತುಮಕೂರು ತಾಲೂಕು ಭೂ ನ್ಯಾಯಮಂಡಲಿ ಸದಸ್ಯ ಹಾಗೂ ಸುದ್ದಿ ಬಿಂಬ ಪತ್ರಿಕೆಯ ಸಂಪಾದಕ ಡಿ.ಎಂ. ಸತೀಶ್, ಪೌರಾಯುಕ್ತ ಬಿ.ಎಚ್. ನಾರಾಯಣಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಆದರ್ಶಕುಮಾರ್ ಪಾಲ್ಗೊಳ್ಳಲ್ಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಸೋ.ಮು. ಭಾಸ್ಕರಾಚಾರ್ ಹಾಗೂ ಚಿಂತಕ ಕೆ. ದೊರೈರಾಜು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸೊಗಡು ಶಿವಣ್ಣ ಬಸ್ ನಿಲ್ದಾಣ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಲಿದ್ದಾರೆ. ಸಿದ್ದಗಂಗಾ ಮಠಾಧ್ಯಕ್ಷ ಡಾ. ಶಿವಕುಮಾರಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.