ಉದ್ಯೋಕ್ಕಾಗಿ ನಕಲಿ ಅಂಕಪಟ್ಟಿ ಸಲ್ಲಿಕೆ: ಶಿಕ್ಷಕ, ಶಾಲೆ ವಿರುದ್ಧ ದೂರು
ತಿಪಟೂರು: ನಕಲಿ ಅಂಕಪಟ್ಟಿ ಸಲ್ಲಿಸಿ ಉದ್ಯೋಗ ಪಡೆದ ಶಿಕ್ಷಕ ಹಾಗೂ ಆತನನ್ನು ನೇಮಕ ಮಾಡಿಕೊಂಡ ಖಾಸಗಿ ಶಾಲೆಯ ಆಡಳಿತ ಮಂಡಳಿ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಶಿಕ್ಷಣ ಇಲಾಖೆ ದೂರು ದಾಖಲಿಸಿದೆ.
ನಗರದ ಗಾಂಧೀನಗರ ಬಡಾವಣೆಯ ಆರ್ಯನ್ ಉರ್ದು ಹಿರಿಯ ಪ್ರಾಥಮಿಕ ಖಾಸಗಿ ಶಾಲೆಯ ಶಿಕ್ಷಕ ಮೆಹಬೂಬ್ ಆಲಿಖಾನ್ ನಕಲಿ ಅಂಕಪಟ್ಟಿ ಸಲ್ಲಿಸಿ 2003ರಲ್ಲಿ ಉದ್ಯೋಗ ಪಡೆದಿದ್ದ. ದಾಖಲೆಗಳನ್ನು ಸಮರ್ಪಕವಾಗಿ ಪರಿಶೀಲಸದೆ ಕರ್ತವ್ಯ ಲೋಪವೆಸಗಿದ ಕಾರಣಕ್ಕೆ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಅಜೀತ್ ಖಾನ್ ವಿರುದ್ಧವೂ ದೂರು ದಾಖಲಾಗಿದೆ.
2003ರ ಸಾಲಿನಲ್ಲಿ ಖಾನ್ ನಕಲಿ ಅಂಕಪಟ್ಟಿ ಸಲ್ಲಿಸಿ ಉದ್ಯೋಗ ಪಡೆದಿದ್ದ. 2009ರಲ್ಲಿ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಅಂದಿನಿಂದಲೇ ಆತನ ಸಂಬಳ ತಡೆಹಿಡಿಯಲಾಗಿತ್ತು. ಪ್ರಕರಣದ ಬಗ್ಗೆ ನಡೆದ ಲೋಕಾಯುಕ್ತ ತನಿಖೆಯಲ್ಲಿ ಕೂಡ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಖಾನ್ ಹಾಗೂ ಶಾಲೆಯ ಕಾರ್ಯದರ್ಶಿ ವಿರುದ್ಧ ದೂರು ದಾಖಲಾಗಿದೆ ಎಂದು ಬಿಇಓ ಮನಮೋಹನ್ ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.