ತುಮಕೂರು

ಕೆ.ರಂಗನಾಥ್ ಅಧ್ಯಕ್ಷರಾಗಿ ಆಯ್ಕೆ

ಶಿರಾ: ಪಟ್ಟಣದ ಭಾರತೀಯ ಜನತಾ ಪಕ್ಷದ ಎಸ್.ಟಿ. ಘಟಕಕ್ಕೆ ಕಲ್ಲುಕೋಟೆ ವಾಸಿ ಕೆ.ರಂಗನಾಥ್ ಅವರನ್ನು ನಗರದ ಎಸ್.ಟಿ. ಮೋರ್ಚಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ನಗರ ಬಿ.ಜೆ.ಪಿ. ಅಧ್ಯಕ್ಷ ಪಡಿ ರಮೇಶ್ ತಿಳಿಸಿದ್ದಾರೆ.
ಕಂಪ್ಯೂಟರ್‌ಗಳನ್ನು ಹೆಚ್ಚಿಗೆ ಮಾಡಿ
ಶಿರಾ: ಶಿರಾ ತಾಲೂಕಿನಲ್ಲಿ ಆಧಾರ್ ಕಾರ್ಡ್ ವಿತರಣೆ ಆಗುತ್ತಿದ್ದು ಜನರು ಕಾರ್ಡ್ ವಿತರಿಸುವ ಕಚೇರಿಯ ಮುಂದೆ ಬೆ. 7 ಗಂಟೆಗೆ ಬಂದು ಸಾಲಿನಲ್ಲಿ ನಿಲ್ಲುತ್ತಾರೆ. ಅಲ್ಲಿ ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ. ದಿನವಿಡೀ ನಿಂತರು ಆಧಾರ್ ಕಾರ್ಡ್ ಸಿಗುವುದು ಕಷ್ಟವಾಗಿದೆ. ಆದ್ದರಿಂದ ಈಗ ಕೇವಲ 2 ಕಂಪ್ಯೂಟರ್ ಸಹಾಯ ದಿಂದ ಆಧಾರ್‌ಕಾರ್ಡ್ ವಿತರಿಸುವ ಕಾರ್ಯ ನಡೆಯುತ್ತಿದ್ದು, ಕಾರ್ಡ್ ಸಿಗುವುದು ಕಷ್ಟವಾಗಿದೆ. ಕಂಪ್ಯೂಟರ್‌ಗಳನ್ನು ಹೆಚ್ಚಿಗೆ ಮಾಡಿ ಜನರಿಗೆ ಅನಕೂಲ ಮಾಡಿಕೊಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಹಾರೋಗೆರೆ ಮಹೇಶ್ ಡಿಸಿಗೆ ಮನವಿ ಮಾಡಿದ್ದಾರೆ.
ಎನ್‌ಎಸ್‌ಎಸ್ ಸಮಾರೋಪ ನಾಳೆ
ತುಮಕೂರು: ತುಮಕೂರಿನ ಎಂಪ್ರೆಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ 2012-13 ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ ಹಾಗೂ ಎನ್‌ಎಸ್‌ಎಸ್ ಸಮಾರೋಪ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ ಸಮಾರಂಭ,  ಪ್ರತಿಭಾ ಪುರಸ್ಕಾರವನ್ನು ಜ. 31 ರಂದು ಬೆಳಗ್ಗೆ 11-30 ಕ್ಕೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾರಂಭವನ್ನು ಸಂಸದ ಜಿ.ಎಸ್. ಬಸವರಾಜ್ ಉದ್ಘಾಟಿಸಲಿದ್ದಾರೆ. ಪ್ರತಿಭಾ ಪುರಸ್ಕಾರವನ್ನು ಪಪೂ ಡಿಡಿಪಿಐ ಜಯಪ್ರಕಾಶ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖ್ಯ ಸಚೇತಕ ಡಾ. ಶಿವಯೋಗಿಸ್ವಾವು, ವಿಧಾನಪರಿಷತ್ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ, ಡಾ.ಎಂ.ಆರ್. ಹುಲಿನಾಯ್ಕರ್ ಪಾಲ್ಗೊಳ್ಳಲ್ಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸೊಗಡು ಶಿವಣ್ಣ ವಹಿಸಲಿದ್ದಾರೆ. ತುಮಕೂರಿನ ರಾಮಕೃಷ್ಣ-ವಿವೇಕಾನಂದಾಶ್ರಮದ ಡಾ. ವೀರೇಶಾನಂದ ಸರಸ್ವತಿ ಸ್ವಾಮಿಗಳು ಸಾನಿಧ್ಯ ವಹಿಸಿ, ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ. ಎಚ್.ಎಸ್. ಸಿದ್ದಪ್ಪನವರ ಮಾರವ್ವ, ಮಾಟ ಮತ್ತು ನಾನು, ಸಿ.ಎಸ್. ಸುಗುಣಾದೇವಿ ಅವರ ಹೃದಯ ಸಂವಾದ ಕೃತಿಗಳು ಬಿಡುಗಡೆಯಾಗಲಿದ್ದು, ಅಧ್ಯಾಪಕ ಕಂಟಲಗೆರೆ ಸಣ್ಣ ಹೊನ್ನಯ್ಯ ಪುಸ್ತಕಗಳ ಕುರಿತು ಮಾತನಾಡಲಿದ್ದಾರೆ. ಪ್ರಿನ್ಸಿಪಾಲ್ ಬಿ. ಮರುಳಯ್ಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮುತ್ತೂಟ್ ಫೈನಾನ್ಸ್ ಜಾಗೃತಿ ಸಮಾವೇಶ
ತಿಪಟೂರು: ಬಿ.ಎಂ.ಶ್ರೀ ರೆಸಿಡೆನ್ಸಿಯಲ್ಲಿ ಮುತ್ತೂಟ್ ಫೈನಾನ್ಸ್ ಹೂಡಿಕೆದಾರರ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬೆಂಗಳೂರು ವಲಯದ ಪ್ರಬಂಧಕ ವಿನೋದ್ ಮುರಾರಿ, ನಿರ್ವಹಣಾ ಕ್ಷೇತ್ರದ ಪ್ರಬಂಧಕ ಆರೋಕ್ಯ ಜೇಸೂರಾಜ್ ಸೇರಿದಂತೆ 110 ಹೂಡಿಕೆದಾರರು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!