ಮಕ್ಕಳು ದೇಶಕ್ಕೆ ಮಾದರಿಯಾಗಲಿ: ಕಮಲಮ್ಮ
ತಿಪಟೂರು: ದೇಶಕ್ಕಾಗಿ ಪ್ರಾಣವನ್ನೇ ಮುಡಿಪಾಗಿಟ್ಟಂತಹ ಮಹಾತ್ಮ ಗಾಂಧೀಜಿ, ಸುಭಾಶ್ಚಂದ್ರ ಬೋಸ್, ಸ್ವಾಮಿ ವಿವೇಕಾನಂದರಂತಹ ಮಹನೀಯರ ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆ ಅಳವಡಿಸಿಕೊಂಡು ದೇಶಕ್ಕಾಗಿ ಹೋರಾಟ ಮಾಡಬೇಕೆಂದು ನೊಣವಿನಕೆರೆ ಗ್ರಾ.ಪಂ. ಅಧ್ಯಕ್ಷರಾದ ಕಮಲಮ್ಮ ತಿಳಿಸಿದರು.
ತಾಲೂಕಿನ ಹೋಬಳಿ ಕೇಂದ್ರವಾದ ನೊಣವಿನಕೆರೆಯ ಸರ್ಕಾರಿ ಶಾಲಾ ಅವರಣದಲ್ಲಿ ಹಮ್ಮಿಕೊಂಡಿದ್ದ 64ನೇ ಗಣರಾಜ್ಯೋತ್ಸವ ಸಮಾರಂದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ದೇಶದಾದ್ಯಂತ ಗಣರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ ಎಂದರಲ್ಲದೆ ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯಗಳಲ್ಲಿ ಭಾಗವಹಿಸುವುದರ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಂಡು ದೇಶಕ್ಕೆ ಮಾದರಿಯಾಗಬೇಕೆಂದು ತಿಳಿಸಿದರು.
ಉಪತಹಸೀಲ್ದಾರ್, ಪೊಲೀಸ್ ಇಲಾಖೆ, ಕಂದಾಯ ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ವಿವಿಧ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು, ಗೃಹ ರಕ್ಷಕ ದಳ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಮಕ್ಕಳಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಾಭಿಮಾನದ ಧೋರಣೆಗಳೊಂದಿಗೆ ಪಥ ಸಂಚಲನ ನಡೆಸಲಾಯಿತು. ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.