ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಇಂದು ಭವ್ಯ ರಥಯಾತ್ರೆ, ಯುವ ಸಮ್ಮೇಳನ

Vishwanath S
Updated On : 3 Jul 2013, 12:31 pm

ತಿಪಟೂರು: ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್, ರಾಮಕೃಷ್ಣ ಭಾವಪ್ರಚಾರ ಪರಿಷತ್, ರಾಮಕೃಷ್ಣ ವಿವೇಕಾನಂದ ಆಶ್ರಮ ಹಾಗೂ ಕಲ್ಪತರು ವಿದ್ಯಾಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ 150ನೇ ಜನ್ಮ ವರ್ಷಾರಣೆಯ ಅಂಗವಾಗಿ ಭವ್ಯ ರಥಯಾತ್ರೆ ಮತ್ತು ಯುವ ಸಮ್ಮೇಳನವನ್ನು ಬುಧವಾರ ಬೆಳಿಗ್ಗೆ 8.30ಕ್ಕೆ ಏರ್ಪಡಿಸಲಾಗಿದೆ.
ಮೆರವಣಿಗೆಯ ಉದ್ಘಾಟನೆಯನ್ನು ಕೆವಿಎಸ್ ಅಧ್ಯಕ್ಷ ಎನ್.ಬಸವಯ್ಯ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪೌರಾಯುಕ್ತ ಚಂದ್ರಶೇಖರಯ್ಯ, ಬಿಇಓ ಮನಮೋಹನ್, ಪ್ರಾಂಶುಪಾಲ ರಂಗನಾಥ್ ಮತ್ತಿತರರು ಭಾಗವಹಿಸಲಿದ್ದಾರೆ. ಅಂದೇ ಬೆಳಿಗ್ಗೆ 11 ಗಂಟೆಗೆ ನಗರದ ಕಲ್ಪತರು ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದರ ಯುವ ಸಮ್ಮೇಳನ ನಡೆಯಲಿದ್ದು, ಸಾನಿಧ್ಯವನ್ನು ರಾಮಕೃಷ್ಣ ಮಠದ ಸ್ವಾಮಿ ತ್ಯಾಗೀಶ್ವರಾನಂದಜೀ, ಸ್ವಾಮಿ ಮಹಾವಾಕ್ಯಾನಂದಜೀ ವಹಿಸಲಿದ್ದಾರೆ. ಉದ್ಘಾಟನೆಯನ್ನು ಗುರುಕುಲಾನಂದಾಶ್ರಮದ ಶ್ರೀ ಇಮ್ಮಡಿ ಕರಿಬಸವೇಶ್ವರ ಸ್ವಾಮೀಜಿ ನೆರವೇರಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement