ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

'ವಿದ್ಯಾರ್ಥಿಗಳಲ್ಲಿ ಕನಿಷ್ಠ ಮಟ್ಟದ ಕಾನೂನು ಅರಿವು ಮೂಡಿಸಿ'

Srinivasa Murthy VN
Updated On : 5 Jul 2013, 10:40 am

ಕುಣಿಗಲ್: ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಹಂತದಲ್ಲೇ  ದೈನಂದಿನ ಜೀವನದಲ್ಲಿ ಬರುವ ಹಲವು ಸಮಸ್ಯೆಗಳನ್ನು ನಿರ್ವಹಿಸುವ ಮಟ್ಟಿಗೆ, ಕನಿಷ್ಠ ಮಟ್ಟದ ಕಾನೂನಿನ ಅರಿವನ್ನು ಶಿಕ್ಷಕರು ಅರಿವು ಮೂಡಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಆರ್.ಶಾರದಾ ಕಿವಿಮಾತು ಹೇಳಿದರು.
ಪಟ್ಟಣದ ಕಂದಾಯ ಭವನದಲ್ಲಿ ಪ್ರೌಢಶಾಲೆಯ ಸಮಾಜ ವಿಷಯ ಶಿಕ್ಷಕರಿಗೆ ಏರ್ಪಡಿಸಿದ್ದ ಕಾನೂನು ಅರಿವು-ನೆರವು ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಪಟ್ಟಣ ಸೇರಿದಂತೆ ಗ್ರಾಮಾಂತರ ಪ್ರದೇಶದ ಬಹುತೇಕರಲ್ಲಿ ದೈನಂದಿನ ಜೀವನ ನಿರ್ವಹಣೆಯಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತಿದ್ದು, ಇವುಗಳನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುವಂತ ಕನಿಷ್ಟ ಮಟ್ಟದ ಕಾನೂನಿನ ಅರಿವಿನ ಕೊರತೆಯಿಂದಾಗಿ ಶೋಷಣೆಗೆ ಒಳಗಾಗುತ್ತಿದ್ದು ನಿಜಕ್ಕೂ ಖೇದಕರ, ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಅರಿವು ಮೂಡಿಸುವ ಶಿಕ್ಷಕರು, ಕನಿಷ್ಟಮಟ್ಟದ ಕಾನೂನಿನ ಅರಿವನ್ನು ತಾವು, ಪಡೆದು ವಿದ್ಯಾರ್ಥಿಗಳಿಗೂ ಅರಿವು ಮೂಡಿಸಿದಾಗ ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದರು.
ನ್ಯಾಯಾಧೀಶ ಎನ್.ಮುನಿರಾಜು ಅಧ್ಯಕ್ಷತೆ ವಹಿಸಿದ್ದು, ನ್ಯಾಯಾಧೀಶೆ ದಾಕ್ಷಾಯಿಣಿ, ಅಧ್ಯಕ್ಷ ದಯಾನಂದ್, ಎಪಿಪಿ ಸುರೇಖ ಹಿರೇಮಠ-ಕ್ರಿಮಿನಲ್ ಕಾನೂನುಗಳು, ನ್ಯಾಯಾಧೀಶೆ ದಾಕ್ಷಾಯಿಣಿ-ಮಹಿಳೆಯರಿಗಾಗಿ ಕಾನೂನು, ವಕೀಲ ಸತ್ಯನಾರಾಯಣ ಒಡೆಯರ್-ಪ್ರಾಧಿಕಾರದ ಧ್ಯೇಯೊದ್ದೇಶಗಳು, ವಕೀಲೆ ವಿಶಾಲಾಕ್ಷಿ-ಜನಸಾಮಾನ್ಯರಿಗಾಗಿ ಕಾನೂನುಗಳು ವಿಷಯದ ಬಗ್ಗೆ ಉಪನ್ಯಾಸ ನೀಡಿದರು.

ಇಂದು ಪಿಂಚಣಿ ಅದಾಲತ್
ಶಿರಾ:
ತಾಲೂಕಿನ ಬರಗೂರು ಗ್ರಾಮದ ಆಂಜನೇಯಸ್ವಾಮಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜು.6 ರಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಅಧ್ಯಕ್ಷತೆಯಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಸಾರ್ವಜನಿಕರು ಕಾರ್ಯಕ್ರಮದ ಪ್ರಯೋಜನ ಸದುಪಯೋಗಪಡಿಸಿಕೊಳ್ಳಲು ತಹಸೀಲ್ದಾರ್ ಎಸ್.ಬಿ.ಕುಲಕರ್ಣಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಯಲು ರಂಗಮಂದಿರ ನಿರ್ಮಾಣ: ಅರ್ಜಿ
ತುಮಕೂರು:
ಜಿಲ್ಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಪ್ರೋತ್ಸಾಹಿಸಲು ಬಯಲು ರಂಗಮಂದಿರ ನಿರ್ಮಿಸಲು ಇಚ್ಚಿಸುವ ಆಸಕ್ತ ಸಂಘ, ಸಂಸ್ಥೆ, ಶಿಕ್ಷಣ ಸಂಸ್ಥೆ, ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿಗಳಿಗೆ ಗರಿಷ್ಠ ರು. 1 ಲಕ್ಷ ಅನುದಾನವನ್ನು ಜಿಲ್ಲಾ ಪಂಚಾಯತ್ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ 2 ಕಂತುಗಳಲ್ಲಿ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಆಸಕ್ತರು ಬಯಲು ರಂಗಮಂದಿರ ನಿರ್ಮಾಣದ ಅಂದಾಜು ಪಟ್ಟಿ, ನೀಲಿ ನಕಾಶೆ, ಸ್ಥಳ ನಿಗದಿಪಡಿಸಿದ ದಾಖಲೆ ಹಾಗೂ ಸರ್ಕಾರ ನೀಡುವ  ರು. 1 ಲಕ್ಷ ಅನುದಾನ ಹೊರತುಪಡಿಸಿ, ಉಳಿದ ಮೊತ್ತ ಭರಿಸುವ ಮೂಲಗಳ ವಿವರಗಳೊಂದಿಗೆ ಪ್ರಸ್ತಾವನೆಯನ್ನು ದ್ವಿ ಪ್ರತಿಯಲ್ಲಿ ಜು.20ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ವಾ.0816-2275204 ಇಲ್ಲಿಗೆ ಸಂಪರ್ಕಿಸಬಹುದು.

ಇಂದು ಪಿಂಚಣಿ ಅದಾಲತ್
ತುಮಕೂರು:
ಶಿರಾ ತಾಲೂಕು ಹುಲಿಕುಂಟೆ ಹೋಬಳಿ ಬರಗೂರು ಗ್ರಾಮದ ಆಂಜನೇಯ ಸ್ವಾಮಿ ಪ.ಪೂ. ಕಾಲೇಜು ಮೈದಾನದಲ್ಲಿ  ಇದೇ ತಿಂಗಳ 6 ರಂದು ಬೆಳಿಗ್ಗೆ 10 ಗಂಟೆಗೆ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ. ಜಯಚಂದ್ರ ಅವರ ಉಪಸ್ಥಿತಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪಿಂಚಣಿ ಅದಾಲತ್‌ನಲ್ಲಿ ಸಾಮಾಜಿಕ ಭದ್ರತಾ ಮಾಸಾಶನಗಳಿಗೆ ಸಂಬಂಧಿಸಿದಂತೆ ಅಹವಾಲು ಸ್ವೀಕರಿಸಲಾಗುವುದು.  ಶಿರಾ ತಾಲೂಕಿನ ಹುಲಿಕುಂಟೆ ಹೋಬಳಿ ವ್ಯಾಪ್ತಿ ನಾಗರೀಕರು ಪಿಂಚಣಿ ಅದಾಲತ್‌ನಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆಯಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ತುಮಕೂರು:
ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ತುಮಕೂರು ವತಿಯಿಂದ  ವಿಕಲಚೇತನರಿಗೆ 2013-14 ಸಾಲಿನಲ್ಲಿ ವಿವಿಧ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಂಗವಿಕಲ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಧಾರ್ ಯೋಜನೆ ಹಾಗೂ ರಾಷ್ಟ್ರೀಯ ಅಂಗವಿಕಲರ ಹಣಕಾಸು ಮತ್ತು ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಹ ವಿಕಲಚೇತನ ಫಲಾನುಭವಿಗಳು ಅರ್ಜಿಗಳನ್ನು ಜು.31 ರೊಳಗಾಗಿ ಸಲ್ಲಿಸಬಹುದಾಗಿದೆ.  ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಂಬಂಧಪಟ್ಟ ಶಾಲಾ ಶಿಕ್ಷಕರ ಮುಖೇನ ಮಗು ಮತ್ತು ಪೋಷಕರ ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ಆಧಾರ್‌ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಅರ್ಜಿಯೊಂದಿಗೆ ಆ.25ರ ಒಳಗೆ ಸಲ್ಲಿಸುವುದು. ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕ ಕಲ್ಯಾಣಾಧಿಕಾರಿಗಳ ಕಚೇರಿ, ಬಾಲಭವನ, ಎಂ.ಜಿ.ರಸ್ತೆ, ತುಮಕೂರು ಇವರನ್ನು ಸಂಪರ್ಕಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement