ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಇಂದು ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ

Vishwanath S
Updated On : 7 Jul 2013, 12:38 pm

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕು ವಿರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಾಲ್ಕನೇ ವದ ತಾಲೂಕು ಮಟ್ಟದ  ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭವನ್ನು  ಭಾನುವಾರ ಬೆಳಿಗ್ಗೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದಾರೆ. ಕುಪ್ಪೂರು ತಮ್ಮಡಿಹಳ್ಳಿ ವಿರಕ್ತಮಠದ ಡಾ.ಅಭಿನವ ಮಲ್ಲಿಕಾರ್ಜುನದೇಶಿಕೇಂದ್ರ ಸ್ವಾಮಿಗಳ ಸಾನಿಧ್ಯದಲ್ಲಿ ನಡೆಯುವ ಸಮಾರಂಭದ ಉದ್ಘಾಟನೆಯನ್ನು ಸಂಸದ ಜಿ.ಎಸ್.ಬಸವರಾಜು  ನೆರವೇರಿಸಲಿದ್ದು, ವಿರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಸಿ. ದಿನೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ಅವರಿಂದ ನಿವೃತ್ತ ನೌಕರರಿಗೆ ಸನ್ಮಾನ, ಮಾಜಿ ಶಾಸಕ ಕೆ.ಎಸ್. ಕಿರಣ್‌ಮಾರ್ ಅವರಿಂದ ಹತ್ತನೇ ತರಗತಿ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ, ವಿಧಾನಸಭಾ ಸದಸ್ಯ ಷಡಕ್ಷರಿ, ತಾ.ಪಂ.ಅಧ್ಯಕ್ಷ ಶಶಿಧರ್, ಜಿ.ಪಂ.ಸದಸ್ಯ ಪಂಚಾಕ್ಷರಿ, ಅಕ್ಷರ ದಾಸೋಹ ಕಾರ್ಯಕ್ರಮದ ಜಂಟಿ ನಿರ್ದೇಶಕ ಜಯಕುಮಾರ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಹಳೆಮನೆ ಶಿವನಂಜಪ್ಪ, ಎಪಿಎಂಸಿ ಅಧ್ಯಕ್ಷ ಶಿವರಾಜು, ಡಯಟ್ ಉಪನಿರ್ದೇಶಕ ಈಶ್ವರಪ್ಪ ಆಗಮಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement