ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಹಿಂದಿ ಶಿಕ್ಷಕನ ವಿರುದ್ಧ ಪ್ರತಿಭಟನೆ

Vishwanath S
Updated On : 7 Jul 2013, 12:37 pm

ಹುಳಿಯಾರು: ಕಳೆದ ಒಂದೂವರೆ ವರ್ಷದಿಂದ ಶಾಲೆಗೆ ಸರಿಯಾಗಿ ಬಾರದೆ ಗೈರು ಹಾಜರಾಗುತ್ತಿದ್ದ ಹುಳಿಯಾರು ಹೋಬಳಿ ಹೊಯ್ಸಲಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂದಿ ಶಿಕ್ಷಕ ಆರ್.ಪರಶಿವಮೂರ್ತಿ ವಿರುದ್ಧ  ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹೊಯ್ಸಲಕಟ್ಟೆ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಹಾಗೂ ಗ್ರಾಮಸ್ಥರು ಶಾಲೆ ಮುಖ್ಯ ದ್ವಾರಕ್ಕೆ ಬೀಗ ಜಡಿದು ಶುಕ್ರವಾರ ಪ್ರತಿಭಟನೆ ನಡೆಸಿದರು.            
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ರಾಗಿರುವ  ಆರ್. ಪರಶಿವಮೂರ್ತಿ ಶಾಲೆಗೆ ಸರಿಯಾಗಿ ಬಾರದೆ ತಿಂಗಳಿಗೊಮ್ಮೆ ಬಂದು ಹಾಜರಾತಿ ಹಾಕಿ ಸಂಬಳ ಪಡೆಯುತ್ತಿದ್ದಾರೆ. ಮಾತ್ರವಲ್ಲ, ತನ್ನ ಪ್ರಭಾವದಿಂದ ಮುಖ್ಯ ಶಿಕ್ಷಕರನ್ನು ತನ್ನ ಹಿಡಿತದಲ್ಲಿಟ್ಟುಕೊಂಡು ತನಗೆ ಬೇಕಾದ ಶಾಲೆಗೆ ಬಂದು ಹೋಗುತ್ತಿದ್ದಾರೆ ಎಂದು ಗ್ರಾಮಸ್ಥರಾದ ಬಾದೇಗೌಡ ದೂರಿದ್ದಾರೆ.
ಅತಿಯಾದ ರಾಜಕೀಯ ಆಸಕ್ತಿ ಹೊಂದಿರುವ ಈತ ಈ ಬಾರಿಯ ರಾಜ್ಯ ಸರ್ಕಾರಿ ನೌಕರರ ಸಂಗದ ಚುನಾವಣೆಯಲ್ಲಿ ಸ್ವರ್ಧಿಸಿದ್ದಾರೆ. ಅಲ್ಲದೆ ತನ್ನೊಂದಿಗೆ ಬಿಇಒ ಅವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದು, ಹಲವು ಬಾರಿ ಈ ಶಿಕ್ಷಕ ಮಾಡುತ್ತಿರುವ ಕಾರ್ಯದ ಬಗ್ಗೆ ಶಾಲಾಭಿವೃದ್ದಿ ಸಮಿತಿ ದೂರು ನಿಡಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಈ ನಿಟ್ಟಿನಲ್ಲಿ ಶಾಲೆಗೆ ಬಾರದೆ, ಮಕ್ಕಳಿಗೆ ಪಾಠ ಮಾಡದೇ ಸರ್ಕಾರಕ್ಕೆ ಮೋಸ ಮಾಡುತ್ತಿರುವ ಶಿಕ್ಷಕನ ವಿರುದ್ಧಿ ಕಠಿಣ ಕ್ರಮ ಕೈಗೊಳ್ಳುವಂತೆ ಕರವೇ ಗ್ರಾಮ ಘಟಕದ ಅಧ್ಯಕ್ಷ ನಾಗರಾಜು ಆಗ್ರಹಿಸಿದ್ದಾರೆ.
ಶಿಕ್ಷಣ ಸಂಯೋಜಕಿ ಭೇಟಿ: ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಿಕ್ಷಣ ಸಂಯೋಜಕಿ ವಿಜಯಕುಮಾರಿ, ಪಿಎಸೈ ಅಂಜಪ್ಪ ಮತ್ತಿತರರು ಪ್ರತಿಭಟನಾಕಾರರೊಂದಿಗೆ ಚರ್ಚಿಸಿ, ಸೋಮವಾರ ಡಿಡಿಪಿಐ ಅವರನ್ನು ಶಾಲೆಗೆ ಕರೆಯಿಸಿ ಆರ್. ಪರಶಿವಮೂರ್ತಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಮಾಡಿದರು.
ಕರವೇ ಪದಾಧಿಕಾರಿಗಳಾದ ಗಿರೀಶ್, ಲೋಕೇಶ್, ಗುರು, ಚಿದಾನಂದ ಸೇರಿದಂತೆ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement