ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸಮಸ್ಯೆಗೆ ಧನಿಯಾಗುವ ಪತ್ರಕರ್ತರೇ ನಿಜ ಜನಪ್ರತಿನಿಧಿಗಳು

Mainashree
Updated On : 13 Jul 2013, 11:05 am

ತುಮಕೂರು: ಭಾರತ ವಿಶ್ವದಲ್ಲಿಯೇ ದೊಡ್ಡ ಪ್ರಜಾಪ್ರಭುತ್ವ ದೇಶ ಎಂಬ ಹೆಗ್ಗಳಿಕೆ ಪಡೆಯಲು ಮಾಧ್ಯಮಗಳೇ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಖಾತೆ  ಸಚಿವ ಎಂ. ವೀರಪ್ಪ ಮೊಯ್ಲಿ ಪ್ರಶಂಶಿಸಿದರು.
ಅವರು ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಾಟಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಾಮಾಜಿಕ ಸಮಸ್ಯೆಗಳಿಗೆ ಧನಿಯಾಗುವ ಪತ್ರಕರ್ತರು ನಿಜವಾದ ಜನಪ್ರತಿನಿಧಿಗಳು. ಜನತೆ ಹಾಗೂ ಸರ್ಕಾರದ ಮಧ್ಯೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಮಾಧ್ಯಮಗಳು ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಹಾಗೂ ಜನಾಭಿಪ್ರಾಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಪ್ರಶಂಶಿಸಿದರು.
ಎತ್ತಿನಹೊಳೆ ಯೋಜನೆಯನ್ನು ಇನ್ನು 20 ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಮೊಯ್ಲಿ ಭರವಸೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ. ಜಯಚಂದ್ರ ಮಾತನಾಡಿ, ಎತ್ತಿನಹೊಳೆ ಯೋಜನೆಗೆ ಕೇಂದ್ರದಿಂದ ಹಣಕಾಸಿನ ನೆರವು ಪಡೆಯಲಾಗುವುದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಹೇಮಾವತಿ ನಾಲಾ ವಿಸ್ತರಣೆ ಹಂತ -ಹಂತವಾಗಿ ನಡೆಯಲಿದೆ. ಈಗಾಗಲೇ ಜಿಲ್ಲೆಯ ಪಾಲಿನ ಹೇಮಾವತಿಯ 18 ಟಿಎಂಸಿ ನೀರು ಪಡೆಯಲಾಗಿದೆ. ಕೊರತೆಯಿರುವ 6 ಟಿಎಂಸಿ ನೀರನ್ನು ಪಡೆಯಲಾಗುವುದು. ಎತ್ತಿನ ಹೊಳೆ ಯೋಜನೆಯಿಂದ ಜಿಲ್ಲೆಯ ಬಹುತೇಕ ಪ್ರದೇಶಗಳಿಗೆ ಕುಡಿಯುವ ನೀರು ಲಭ್ಯವಾಗಲಿದೆ ಎಂದು ತಿಳಿಸಿದರು.
 ಜಿಲ್ಲಾಧಿಕಾರಿ ಕೆ.ಸತ್ಯಮೂರ್ತಿ, ಜಿಪಂ ಸಿಇಓ ಗೋವಿಂದರಾಜು, ರಾಜ್ಯ ಸಂಘದ ಅಧ್ಯಕ್ಷ ಗಂಗಾಧರ ಮೊದಲಿಯಾರ್, ಜಿಲ್ಲಾ ಸಂಘದ ಅಧ್ಯಕ್ಷ ಸೊಗಡು ವೆಂಕಟೇಶ್,  ಉಪಾಧ್ಯಕ್ಷ ಚಿ.ನಿ. ಪುರುಷೋತ್ತಮ್, ಖಜಾಂಚಿ ಹರೀಶ್ ಎಸ್.ಆಚಾರ್ಯ,ಪ್ರಧಾನ ಕಾರ್ಯದರ್ಶಿ ಗರುಗದೊಡ್ಡಿ ನಟರಾಜ್, ಪ್ರಥಮ ಕಾರ್ಯದರ್ಶಿ ಎನ್.ಡಿ. ರಂಗರಾಜು, ಬರಗೂರು ವಿರೂಪಾಕ್ಷ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement