ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ನಂಜಾವಧೂತ ಸ್ವಾಮೀಜಿ ಅವಹೇಳನಕ್ಕೆ ಆಕ್ರೋಶ: ಕಾಲ್ನಡಿಗೆ ಜಾಥಾಕ್ಕೆ ನಿರ್ಧಾರ

Rashmi Kasaragodu
Updated On : 20 Jul 2013, 12:27 pm

ಶಿರಾ: ಶ್ರೀ ಕ್ಷೇತ್ರ ಪಟ್ಟನಾಯಕನಹಳ್ಳಿಯ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಂಜಾವಧೂತ ಸ್ವಾಮೀಜಿ ಅವರನ್ನು ಕೆಲವರು ಅವಹೇಳನಕಾರಿಯಾಗಿ ನಿಂದಿಸಿರುವುದಕ್ಕೆ ಶ್ರೀ ಮಠದ ಭಕ್ತ ಸಮೂಹದಿಂದ ಬೃಹತ್ ಪ್ರತಿಭಟನೆ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಭಕ್ತ ಸಮೂಹದ ಮುಖಂಡರು ತಿಳಿಸಿದರು.
ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಮಠದ ಭಕ್ತರು ಮತ್ತು ಮುಖಂಡರು ಶ್ರೀ ಕ್ಷೇತ್ರದ 7ನೇ ಪೀಠಾಧ್ಯಕ್ಷರಾದ ಶ್ರೀಗಳನ್ನು ಕ್ಷುಲ್ಲಕ ಕಾರಣದಿಂದ ಅವಾಚ್ಯ ಶಬ್ದಗಳಿಂದ ನಿಂದಿಸಿ, ದೃಶ್ಯ ಮಾಧ್ಯಮ ಮತ್ತು ಪತ್ರಿಕಾ ಮಾದ್ಯಮಗಳಲ್ಲಿ ಹೇಳಿಕೆ ನೀಡಿರುವುದು ಖಂಡನೀಯ ಎಂದರು.
ಬೃಹತ್ ಕಾಲ್ನಡಿಗೆ ಜಾಥಾವನ್ನು ಜುಲೈ 22 ಸೋಮವಾರ ಬೆಳಿಗ್ಗೆ 9 ಗಂಟೆಗೆ ಶ್ರೀ ಕ್ಷೇತ್ರ ಪಟ್ಟನಾಯಕನಹಳ್ಳಿಯಿಂದ ಶಿರಾ ತಾಲೂಕು ಕಚೇರಿವರೆಗೆ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಂಡಿದ್ದು ಜಾಥಾ ಮುಗಿದ ನಂತರ ತಾಲೂಕು ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಕುಂಚಿಟಿಗರ ಸಂಘದ ಅಧ್ಯಕ್ಷ ಗುಳಿಗೇನಹಳ್ಳಿ ನಾಗರಾಜು, ನಿರ್ದೆಶಕರುಗಳಾದ ಬಾಂಬೆ ರಾಜಣ್ಣ, ಅರೇಹಳ್ಳಿ ಬಾಬು, ಮುಖಂಡರಾದ ಮರುಡಪ್ಪ, ಮಲ್ಲಪ್ಪ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement