ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮಕ್ಕೆ ಚಾಲನೆ

Rashmi Kasaragodu
Updated On : 20 Jul 2013, 12:25 pm

ಕ.ಪ್ರ. ವಾರ್ತೆ   ಮಧುಗಿರಿ   ಜು.19
ರಾಷ್ಟ್ರದ ಅಭ್ಯುದಯಕ್ಕೆ ಆರೋಗ್ಯವಂತ ಮಕ್ಕಳನ್ನು ತಯಾರು ಮಾಡುವ ನಿಟ್ಟಿನಲ್ಲಿ ಶಿಕ್ಷಕರು ಮುತುವರ್ಜಿ ವಹಿಸಬೇಕು ಎಂದು ಶಾಸಕ ಕೆ.ಎನ್. ರಾಜಣ್ಣ ಕರೆ ನೀಡಿದರು.
ಬುಧವಾರ ಇಲ್ಲಿನ ಪಶ್ಚಿಮ ಬಡಾವಣೆ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಪೌಷ್ಟಿಕಾಂಶದ ಕೊರತೆಯಿಂದ ಅಂಗವಿಕಲತೆ, ರಕ್ತ ಹೀನತೆಯಿಂದ ಬಳಲುತ್ತಿರುವುದನ್ನು ಮನಗಂಡ ಸರ್ಕಾರ ಮಕ್ಕಳ ಮಾನಸಿಕ, ದೈಹಿಕ ಸಾಮರ್ಥ್ಯ ವೃದ್ಧಿಯಾಗಿ ಆರೋಗ್ಯ ಕಾಪಾಡಿಕೊಂಡು ಶೈಕ್ಷಣಿಕ ಪ್ರಗತಿಗೆ ಪೂರಕವಾಗುವ ಸದುದ್ದೇಶದಿಂದ ಕಬ್ಬಿಣಾಂಶದ ಮಾತ್ರೆ ವಿತರಿಸುವ ಮೂಲಕ ಉತ್ತಮ ಯೋಜನೆ ರೂಪಿಸಿದೆ ಎಂದರು. ಡಿಡಿಪಿಐ ಆಂಜನಪ್ಪ ಮಾತನಾಡಿ, ಮಕ್ಕಳು ಈ ಮಾತ್ರೆ ಸೇವಿಸುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದರು.
ತಾಪಂ ಅಧ್ಯಕ್ಷೆ ಯಶೋಧ ರಾಜಣ್ಣ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ತಹಸೀಲ್ದಾರ್ ರಮೇಶ್, ಮುಖಂಡ ರಾಮಣ್ಣ, ಎಂ.ಜಿ. ಶ್ರೀನಿವಾಸಮೂರ್ತಿ, ಜಿಪಂ ಸದಸ್ಯೆ ಸುಮನಾ, ಪುರಸಭೆ ಸದಸ್ಯ ಎನ್. ಗಂಗಣ್ಣ, ಮಾಜಿ ಅಧ್ಯಕ್ಷ ಎಂ.ವಿ. ಗೋವಿಂದರಾಜು ಮೊದಲಾದವರು ಉಪಸ್ಥಿತರಿದ್ದರು. ಬಿಇಒ ವೈ.ಎನ್. ರಾಮಕೃಷ್ಣಯ್ಯ ಸ್ವಾಗತಿಸಿ, ವಂದಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement