ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ನಿರುದ್ಯೋಗಿ ಯುವಕರು ತರಬೇತಿ ಪಡೆದು ಆರ್ಥಿಕವಾಗಿ ಸದೃಢವಾಗಲಿ

Rashmi Kasaragodu
Updated On : 22 Jul 2013, 1:16 am

ಕನ್ನಡಪ್ರಭ ವಾರ್ತೆ   ಕೊರಟಗೆರೆ   ಜು.21
ಪಟ್ಟಣ ಪಂಚಾಯಿತಿಯ ಎಸ್ಜಿಎಸ್ಆರ್ವೈ ಯೋಜನೆಯಡಿ ನಿರುದ್ಯೋಗಿ ಯುವಕರು ನಾನಾ ರೀತಿಯ ತರಬೇತಿ ಪಡೆದು ಆರ್ಥಿಕವಾಗಿ ಸದೃಢರಾಗುವಂತೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿರ್ದೇಶಕ ಕೆ.ಆರ್. ಹೊನ್ನೇಶ್ ತಿಳಿಸಿದರು.
ಅವರು ಪಟ್ಟಣ  ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಸ್ವರ್ಣ ಜಯಂತಿ ಶಹರಿ ರೋಜ್ಗಾರ್ ಯೋಜನೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಯುವಕರಿಗೆ ಉದ್ಯೋಗ ನೀಡುವ ದೃಷ್ಟಿಯಿಂದ ಪ್ಲಂಬಿಂಗ್, ಸ್ಯಾನಟರಿಷನ್ ಹಾಗೂ ಕಾಪೆಂರ್ಟರ್ ಕೆಲಸಗಳ ತರಬೇತಿ ಪಡೆದು ಸ್ವಾವಲಂಬಿಗಳಾಗಿ ಬದುಕುವುದನ್ನು ಕಲಿಯುವಂತೆ ಹೇಳಿದರು.
ಪ.ಪಂ. ಮುಖ್ಯಾಧಿಕಾರಿ ಶ್ರೀನಿವಾಸ್ ಮಾತನಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಯುವಕರು ಇಲಾಖೆಯಿಂದ ನೀಡುವ ಒಂದು ತಿಂಗಳ ಗೌರವಧನದೊಂದಿಗೆ ತರಬೇತಿ ಪಡೆದು ಸ್ವಯಂ ಉದ್ಯೋಗ ಕಂಡುಕೊಳ್ಳಲು ಮುಂದಾಗುವಂತೆ ತಿಳಿಸಿದರು.  ರಾಜೀವ್ ಗಾಂಧಿ ಗ್ರಾಮೀಣ ನಿಗಮದ ಅಂಜನಮೂರ್ತಿ, ದೊಡ್ಡಾಳಪ್ಪ, ನಾಗರಾಜು, ಸಾವಿತ್ರಮ್ಮ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement