ಅಧಿಕ ಇಳುವರಿ ಪಡೆಯಿರಿ'
ಜಾವಗಲ್: ಗ್ರಾಮೀಣ ಭಾಗದ ಕೃಷಿಕರು ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಂಡು ಅಧಿಕ ಇಳುವರಿ ಪಡೆದುಕೊಳ್ಳಬೇಕೆಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಕವಿತಾ ಮಂಜುನಾಥ್ ಕರೆ ನೀಡಿದರು. ಭಾನುವಾರ ಜಾವಗಲ್ ರೈತ ಸಂಪರ್ಕ ಕೇಂದ್ರದ ವತಿಯಿಂದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಗುಚ್ಚ ಗ್ರಾಮ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.