ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕಾಡಂದಿ ದಾಳಿ: ಮೂವರಿಗೆ ಗಾಯ

Rashmi Kasaragodu
Updated On : 3 Jun 2013, 11:48 am

ಕೆ.ಆರ್. ನಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಕಾಡು ಹಂದಿ ದಾಳಿ ನಡೆಸಿದ ಪರಿಣಾಮ ಮಹಿಳೆ ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ತಾಲೂಕಿನ ಕೆಸ್ತೂರುಕೊಪ್ಪಲು ಮತ್ತು ಕಂಚುಗಾರನ ಕೊಪ್ಪಲಿನಲ್ಲಿ ಈ ಘಟನೆ ನಡೆದಿದ್ದು, ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಕೆಸ್ತೂರುಕೊಪ್ಪಲಿನ ನವೀನ್ಕುಮಾರ್ ಅವರ ಪತ್ನಿ ಮಂಜುಳಾ ಕೆ.ಆರ್. ನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಂಚುಗಾರನಕೊಪ್ಪಲಿನ ಕೆ.ಎನ್. ರಾಮೇಗೌಡ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೋರೆಗೌಡ ಎಂಬವವರಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ. ಕೆ.ಎನ್. ರಾಮೇಗೌಡ ಅವರ ಮೇಲೆ ಕಾಡು ಹಂದಿ ಏಕಾಏಕಿ ದಾಳಿ ಮಾಡಿದ ಗಾಯಗೊಳಿಸಿ ನಂತರ ರಸ್ತೆಯಲ್ಲಿ ಸೈಕಲ್ ಮೇಲೆ ತೆರಳುತ್ತಿದ್ದ ಬೋರೆಗೌಡ ಅವರ ಮೇಲೂ ದಾಳಿ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement