ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬೆದರಿಸಿ ಹಣ ಲೂಟಿ

Rashmi Kasaragodu
Updated On : 3 Jun 2013, 11:47 am

ಬಂಗಾರಪೇಟೆ:  ಪೆಟ್ರೋಲ್ ಹಾಕಿಸಿಕೊಳ್ಳುವ ನೆಪದಲ್ಲಿ ಮೂವರು ದುಷ್ಕರ್ಮಿಗಳು ಬೈಕ್ನಲ್ಲಿ ಬಂದು ಬಂಕ್ ಸಿಬ್ಬಂದಿಯನ್ನು ಬೆದರಿಸಿ 23000 ನಗದು ಕಸಿದು ಪರಾರಿಯಾಗಿರುವ ಘಟನೆ ಆನಂದಗಿರಿ ಬಳಿಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ನಲ್ಲಿ ಭಾನುವಾರ ರಾತ್ರಿ ನಡೆದಿದೆ. ಪಟ್ಟಣದ ಹೊರವಲಯದ ರಂಗಪ್ಪ ಎಂಬವರಿಗೆ ಸೇರಿದ ಪೆಟ್ರೋಲ್ ಬಂಕ್ಗೆ ಮೂವರು ದುಷ್ಕರ್ಮಿಗಳು ಬೈಕ್ನಲ್ಲಿ ಬಂದು ಮೊದಲು ಪೆಟ್ರೋಲ್ ಹಾಕುವಂತೆ ಸೂಚಿಸಿದ್ದಾರೆ. ಟ್ಯಾಂಕ್ ತುಂಬಾ ಇಂಧನ ಹಾಕಿಸಿಕೊಂಡು ಬಂಕ್ನಲ್ಲಿ ಒಬ್ಬನೇ ಇದ್ದ ಯಶವಂತ್ ಎಂಬ ಸಿಬ್ಬಂದಿಗೆ ಚಾಕು ತೋರಿಸಿ ಬ್ಯಾಗ್ನಲ್ಲಿದ್ದ 23000 ನಗದು ಕಸಿದು ಪರಾರಿಯಾಗಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement