ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಗುಬ್ಬಿಯಲ್ಲಿ ಸರಣಿ ಕಳ್ಳತನ

Rashmi Kasaragodu
Updated On : 5 Jun 2013, 12:10 pm

ಗುಬ್ಬಿ: ಇಲ್ಲಿನ ಮೂರು ಅಂಗಡಿ ಷಟರ್ ಮೀಟಿ  ಕಳ್ಳರು ಸುಮಾರು 500 ರು.ನಗದು  ದೋಚಿಕೊಂಡು ಪರಾರಿಯಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ- 206ಕ್ಕೆ ಹೊಂದಿಕೂಂಡಂತಿರುವ ಸಿದ್ದಶ್ರೀ ಮೆಡಿಕಲ್, ದೊನೆ ಗಂಗಾ ಪುಸ್ತಕ ಮಾರಾಟದ ಅಂಗಡಿ ಹಾಗೂ ಮೊಬೈಲ್ ಅಂಗಡಿಯಲ್ಲಿ ರಾತ್ರಿ ಸರಣಿ ಕಳ್ಳತನ ನಡೆದಿದೆ.   ನಂತರ ತೋಟದ ಮನೆಯೊಂದಕ್ಕೆ ನುಗ್ಗಲು ಯತ್ನಿಸಿರುವ ಕಳ್ಳರು ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ದ್ವಿ ಚಕ್ರ ವಾಹನಗಳನ್ನು ದೂರ ತಳ್ಳಿಕೊಂಡು ಹೋಗಿದ್ದಾರೆ. ಅಲ್ಲಿ ಬೈಕ್‌ಗಳನ್ನು ಸ್ಟಾರ್ಟ್ ಮಾಡಲು ಯತ್ನಿಸಿದ್ದಾರೆ. ಆದರೆ ಬೈಕ್ ಸ್ಚಾರ್ಟ್ ಆಗದ ಕಾರಣ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಸುದ್ದಿ ತಿಳಿದ ಕೂಡಲೆ ಗುಬ್ಬಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement