ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ತಾಲೂಕಿನ ಸಮಸ್ಯೆ ನಿವಾರಣೆಗೆ ಒತ್ತು: ಕೆಎಸ್‌ಎಸ್

Rashmi Kasaragodu
Updated On : 5 Jun 2013, 12:08 pm

ತಿಪಟೂರು: ತಾಲೂಕಿನ ಕುಡಿಯುವ ನೀರು, ಅಂತರ್ಜಲ ಸಮಸ್ಯೆ, ಮಾಸಿಕ ವೇತನ, ಪಡಿತರ ಚೀಟಿ, ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಸೇರಿದಂತೆ ಮತ್ತಿತರ ವಿಚಾರಗಳ ಬಗ್ಗೆ ತಾಲೂಕಿನ ಅಧಿಕಾರಿಗಳೊಂದಿಗೆ ಸಭೆ ಕರೆದು ಸುದೀರ್ಘ ಚರ್ಚೆ ನಡೆಸಿ ಸಮಸ್ಯೆಗಳ ಪರಿಹಾರಕ್ಕಾಗಿ ಶಾಸಕರಾದ ಕೆ.ಷಡಕ್ಷರಿ ಸ್ಪಷ್ಟ ನಿರ್ದೇಶನ ನೀಡಿದ್ದಾರೆಂದು ತಾಲೂಕು ಕಾಂಗ್ರೆಸ್ ವಕ್ತಾರ ಕೆ.ಎಸ್.ಸದಾಶಿವಯ್ಯ ತಿಳಿಸಿದ್ದಾರೆ.
ತಾಲೂಕಿನಲ್ಲಿ ಉಂಟಾಗಿರುವ ಬರಗಾಲ ಪರಿಸ್ಥಿತಿ, ಜನರ ಜೀವನಾಡಿ ತೆಂಗಿನ ಮರಗಳು ರೋಗ ಬಾಧೆಯಿಂದ ತತ್ತರಿಸುತ್ತಿರುವ ಬಗ್ಗೆ ಕೊಬ್ಬರಿ ಬೆಲೆ ಕುಸಿತ ಹಾಗೂ ನಫೆಡ್ ಮೂಲಕ ಕೊಬ್ಬರಿ ಕೊಳ್ಳುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂಬಂಧಪಟ್ಟ ಇಲಾಖಾ ಸಚಿವರೊಂದಿಗೆ ಈಗಾಗಲೆ ಶಾಸಕರು ಚರ್ಚಿಸಿ ಶೀಘ್ರ ಪರಿಹಾರಕ್ಕಾಗಿ ಶಾಸಕರು ಒತ್ತಾಯಿಸಿದ್ದಾರೆಂದು ತಿಳಿಸಿದರು.
ತಾಲೂಕಿನಲ್ಲಿ ಎಲ್ಲಾ ಇಲಾಖೆಗಳಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವ ಮೂಲಕ ಜನಸಾಮಾನ್ಯರಿಗೆ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ದೊರಕಿಸಿ ಕೊಡುವತ್ತ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕರು ತಿಳಿಸಿದ್ದಾರೆಂದು ಕೆ.ಎಸ್. ಸದಾಶಿವಯ್ಯ ಹೇಳಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement