ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ವಿಷ ಸೇವಿಸಿ ರೈತ ಆತ್ಮಹತ್ಯೆ

Rashmi Kasaragodu
Updated On : 5 Jun 2013, 12:12 pm

ಮಳವಳ್ಳಿ: ಜೀವನದಲ್ಲಿ ಜಿಗುಪ್ಸೆಗೊಂಡ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನೆಲಮಾಕನಹಳ್ಳಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಸಿದ್ದೇಗೌಡ(50) ಎಂಬುವರೆ ಆತ್ಮಹತ್ಯೆಗೆ ಶೆರಣಾಗಿದ್ದು ಭಾನುವಾರ ವಿಷ ಸೇವಿಸಿ ಅಸ್ವಸ್ಥರಾದವರನ್ನು  ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮುಂಜಾನೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇವರು  ಆತ್ಮಹತ್ಯೆ ಮಾಡಿಕೊಂಡಿದ್ದು ಮೃತನ ಸಂಬಂಧಿ ಪೊಲೀಸರಿಗೆ ದೂರು ನೀಡಿದ್ದು ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement