ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಪರಿಸರ ಜಾಥಾ ಕಾರ್ಯಕ್ರಮ

Rashmi Kasaragodu
Updated On : 8 Jun 2013, 12:05 pm

ತಿಪಟೂರು: ನಗರದ ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ, ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮ ನಡೆಸಲಾಯಿತು.  ಕಾರ್ಯಕ್ರಮದಲ್ಲಿ 5 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ.ಗೀತಾ, ಸಿವಿಲ್ ಹಿರಿಯ ನ್ಯಾಯಾಧೀಶರಾದ ಕೆ.ಎಂ.ರಾಜಶೇಖರ್, ಶಾಸಕ ಕೆ.ಷಡಕ್ಷರಿ, ವಕೀಲರ ಸಂಘದ ಅಧ್ಯಕ್ಷ ಜಯಣ್ಣ, ತಹಸೀಲ್ದಾರ್ ಮಂಜುನಾಥ್, ಅರಣ್ಯಾಧಿಕಾರಿ ಸತ್ಯನಾರಾಯಣ, ಪೌರಾಯುಕ್ತ ಚಂದ್ರಶೇಖರ್, ನಗರ ಪೊಲೀಸ್ ಠಾಣೆ ಸಿಪಿಐ ನಾಗರಾಜು ಉಪಸ್ಥಿತರಿದ್ದರು.  ಈ ಸಂದರ್ಭದಲ್ಲಿ ನಗರದ ವಿವಿಧ ಶಾಲೆಯ ವಿದ್ಯಾರ್ಥಿಗಳೊಂದಿಗೆ ಜಾಥಾ ಕಾರ್ಯಕ್ರಮ ನಡೆಸಲಾಯಿತು.
ಬಿಎಫ್ಎ ಪದವಿಗೆ ಅರ್ಜಿ ಆಹ್ವಾನ
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಲಲಿತಕಲೆ ಪದವಿ (ಬಿಎಫ್ಎ) ತರಗತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಶ್ವವಿದ್ಯಾನಿಲಯದ ಭಾರತರತ್ನ ಡಾ. ಎಂ. ಎಸ್. ಸುಬ್ಬುಲಕ್ಷ್ಮೀ ಲಲಿತ ಕಲಾ ವಿಭಾಗದಲ್ಲಿ ಎರಡು ವರ್ಷಗಳ ಫೌಂಡೇಶನ್ ಕೋರ್ಸ್ ಹಾಗೂ ಮೂರು ವರ್ಷಗಳ ಬಿಎಫ್ಎ ಪದವಿ ಕೋರ್ಸ್ಗಳಿದ್ದು, ಜೂನ್ 10 ರಿಂದ ಅರ್ಜಿ ನಮೂನೆ ವಿತರಿಸಲಾಗುವುದು. ಅರ್ಹ ಅಭ್ಯರ್ಥಿಗಳು, ಮುಖ್ಯಸ್ಥರು, ಭಾರತರತ್ನ ಡಾ. ಎಂ.ಎಸ್. ಸುಬ್ಬುಲಕ್ಷ್ಮೀ ಲಲಿತ ಕಲಾ ವಿಭಾಗ, ತುಮಕೂರು ವಿಶ್ವವಿದ್ಯಾನಿಲಯ ಇವರಿಂದ ಅರ್ಜಿ ನಮೂನೆ ಪಡೆದುಕೊಳ್ಳಬಹುದು ಎಂದು ವಿ.ವಿ. ಸ್ನಾತಕೋತ್ತರ ವಿಭಾಗಗಳ ನಿರ್ದೇಶಕರು ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಚಿಕ್ಕನಾಯಕನಹಳ್ಳಿ:  ತಾಲೂಕಿನಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಅನೀಸ್ ಖೈಸರ್ ತಿಳಿಸಿದ್ದಾರೆ. ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಬರಗೂರು ಪಂಚಾಯ್ತಿ ರಂಗೇನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿದ್ದು, ಸದರಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಪ್ರಕಟಣೆಯಲ್ಲಿ ತಿಳಿಸಿರುವಂತೆ ಅಗತ್ಯ ದಾಖಲಾತಿಗಳೊಂದಿಗೆ 28-6-2013ರ ಸಂಜೆ 5.30 ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಚಿಕ್ಕನಾಯಕನಹಳ್ಳಿ ಇಲ್ಲಿಗೆ ತಲುಪುವಂತೆ ಕಳುಹಿಸುವುದು. ಹೆಚ್ಚಿನ ವಿಷಯಗಳಿಗೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement