ನಾಳೆ ಉದ್ಯೋಗ ನೇಮಕಾತಿ ಪತ್ರ ವಿತರಣೆ
ತುಮಕೂರು: ವಿಪ್ರೋವೇಸ್ನಿಂದ ವಿದ್ಯಾವಾಹಿನಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ನೇಮಕಾತಿ ಪತ್ರ ವಿತರಣಾ ಸಮಾರಂಭವನ್ನು ಜೂ. 11 ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ವಿಪ್ರೋವೇಸ್ ಕಂಪನಿ ವಿದ್ಯಾವಾಹಿನಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2012-13 ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅಂತಿನ ಸೆಮಿಸ್ಟರ್ ಬಿಎಸ್ಸಿ, ಮತ್ತು ಬಿಸಿಎ ವಿಭಾಗಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಉದ್ಯೋಗ ಸಂದರ್ಶನ ನಡೆಸಿತ್ತು. ಈ ಸಂದರ್ಭದಲ್ಲಿ ಆಯ್ಕೆಯಾದ 27 ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು. ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾವಾಹಿನಿ ಸಂಸ್ಥೆಯ ಅಧ್ಯಕ್ಷ ಕೆ.ಬಿ. ಜಯಣ್ಣ ವಹಿಸಲಿದ್ದಾರೆ.
ಸಮಾರಂಭವನ್ನು ಎಸ್ಐಟಿ ಕಾಲೇಜಿನ ನಿರ್ದೇಶಕ ಡಾ.ಎಂ.ಎನ್. ಚನ್ನಬಸಪ್ಪ ಉದ್ಘಾಟಿಸಲಿದ್ದಾರೆ. ಎಂದು ಕಾಲೇಜಿನ ಪ್ರಿನ್ಸಿಪಾಲ್ ತಿಳಿಸಿದ್ದಾರೆ.