ನರೇಂದ್ರ ಮೋದಿ ಪ್ರಧಾನಿಯಾಗಲಿ
ಕ.ಪ್ರ.ವಾರ್ತೆ ತುಮಕೂರು ಜೂ. 10
ನರೇಂದ್ರ ಮೋದಿ ಮುಂದಿನ ಪ್ರಧಾನಿಯಾಗಬೇಕು. ದೇಶದ ಸಮಗ್ರ ಅಭಿವೃದ್ಧಿಗೆ ಮೋದಿ ನಾಯಕರಾಗಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವಪ್ರಸಾದ್ ಅಭಿಪ್ರಾಯಪಟ್ಟರು.
ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರನ್ನು ಪಕ್ಷ ನೇಮಕ ಮಾಡಿದ ಹಿನ್ನೆಲೆಯಲ್ಲಿ ಟೌನ್ಹಾಲ್ನಲ್ಲಿ ಏರ್ಪಾಟಾಗಿದ್ದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು.
ಕೋಟ್ಯಂತರ ಜನರ ಆಶಯದಂತೆ ಅಭಿವೃದ್ಧಿಯ ಹರಿಕಾರರಾಗಿರುವ ನರೇಂದ್ರ ಮೋದಿಯವರನ್ನು ಬಿಜೆಪಿ ಕಾರ್ಯಕಾರಿಣಿ ಸಮಿತಿ ಮುಂದಿನ ಲೋಕಸಭಾ ಚುನಾವಣೆಗೆ ಪ್ರಚಾರ ಸಮಿತಿ ಅದ್ಯಕ್ಷರಾಗಿ ನೇಮಕ ಮಾಡಿರುವುದು ಸ್ವಾಗತಾರ್ಹ ಎಂದರು. ಟೌನ್ಹಾಲ್ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದ ಬಿಜೆಪಿ ಕಾರ್ಯಕರ್ತರು, ನಂತರ ಆದಿಶೇಷ ವಿನಾಯಕ ದೇವಸ್ಥಾನದಲ್ಲಿ ನರೇಂದ್ರ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ರಾಜ್ಯ ಬಿಜೆಪಿ ಕಾರ್ಯದರ್ಶಿ ಅಶ್ವತ್ಥನಾರಾಯಣ, ಎಂಎಸ್ಐಎಲ್ ಮಾಜಿ ಅಧ್ಯಕ್ಷ ಎಂ.ಬಿ. ನಂದೀಶ್, ಬೈರಪ್ಪ, ಟೂಡಾ ಮಾಜಿ ಅಧ್ಯಕ್ಷ ಎಸ್. ಆರ್. ಶ್ರೀಧರಮೂರ್ತಿ, ನಗರಸಭೆ ಸದಸ್ಯ ಬಿ.ಎಸ್.ನಾಗೇಶ್, ಮುಖಂಡರಾದ ದೊಡ್ಡಮನೆ ಗೋಪಾಲಗೌಡ, ರುದ್ರೇಶ್, ಓಂ ನಮೋ ನಾರಾಯಣ, ನಂದೀಶ್, ಎಸ್ಟಿಡಿ ನಾಗರಾಜ್, ಕೆ.ಪಿ. ಮಹೇಶ್ ಇತರರು ಪಾಲ್ಗೊಂಡಿದ್ದರು.