ಮೆಟ್ರಿಕ್ ನಂತರದ ಹಾಸ್ಟೆಲ್ಗೆ ಅರ್ಜಿ ಆಹ್ವಾನ
ತಿಪಟೂರು: ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ವರ್ಗದ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಮೆಟ್ರಿಕ್ ನಂತರದ (ಬಾಪೂಜಿ) ಬಾಲಕರ ವಿದ್ಯಾರ್ಥಿನಿಯದಲ್ಲಿರುವ ಖಾಲಿ ಸ್ಥಾನಗಳಿಗೆ ಪ್ರವೇಶಕ್ಕಾಗಿ ಅರ್ಹ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ತಿಪಟೂರು ಅಥವಾ ವಿದ್ಯಾರ್ಥಿ ನಿಲಯದ ವಾರ್ಡನ್ ಅವರಿಂದ ಉಚಿತವಾಗಿ ಪಡೆದು ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಲು ಜೂ.25 ಕೊನೆಯ ದಿನಾಂಕವಾಗಿದೆ. ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಕಪಟ್ಟಿ, 2 ಸ್ಟಾಂಪ್ ಸೈಜ್ ಭಾವಚಿತ್ರಗಳನ್ನು ಲಗತ್ತಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳು ನಿಲಯದ ನಿಬಂಧನೆಗೆ ಒಳಪಡಬೇಕು. ಹೆಚ್ಚಿನ ವಿವರಗಳಿಗೆ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.
ನಾಳೆ ಪ್ರಗತಿ ಪರಿಶೀಲನಾ ಸಭೆ
ತಿಪಟೂರು: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜೂ.13ರ ಬೆಳಿಗ್ಗೆ 11ಗಂಟೆಗೆ ತಾ.ಪಂ. ಅಧ್ಯಕ್ಷರಾದ ಎನ್. ಭಾನುಪ್ರಕಾಶ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಪ್ರಗತಿಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಕರೆಯಲಾಗಿದೆ. ಆದ್ದರಿಂದ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ತಪ್ಪದೆ ಭಾಗವಹಿಸಬೇಕೆಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.