ಇಂದು ಪ್ಲಾಸ್ಟಿಕ್ ನಿಯಂತ್ರಣ ಜಾಗೃತಿ ಕಾರ್ಯಕ್ರಮ
ತುಮಕೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರಾಜ್ಯ ವಿಜ್ಞಾನ ಪರಿಷತ್, ಪರಿವರ್ತನಾ ಟಾರಿಟಬಲ್ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಪ್ಲಾಸ್ಟಿಕ್ ನಿಯಂತ್ರಣ ಜಾಗೃತಿ ಕಾರ್ಯಕ್ರಮವನ್ನು ಜೂ. 18 ರಂದು ಮಧ್ಯಾಹ್ನ 3 ಗಂಟೆಗೆ ತುಮಕೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ನಗರದ ಹನುಮಂತಪುರದ ಕೊಲ್ಲಾಪುರದಮ್ಮ ದೇವಸ್ಥಾನದ ಆವರಣದಲ್ಲಿ ಮಧ್ಯಾಹ್ನ 3 ಗಂಟೆಗೆ ಏರ್ಪಾಟಾಗಿದೆ. ಸಮಾರಂಭವನ್ನು ನಗರಸಭಾ ಸದಸ್ಯೆ ಲಲಿತಾ ರವೀಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪರಿಸರವಾದಿ ಟಿ.ವಿ.ಎನ್. ಮೂರ್ತಿ, ಯುವ ಮುಖಂಡ ರವೀಶ್ ಜಾಂಗೀರ್, ಹನುಮಂತಪುರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ರಾಮಕೃಷ್ಣ , ಜಿಲ್ಲಾ ವಿಜ್ಞಾನ ಕೇಂದ್ರದ ಉಪಾಧ್ಯಕ್ಷೆ ಹಾಗೂ ಉಪನ್ಯಾಸಕಿ ಅಕ್ಕಮ್ಮ ಪಾಲ್ಗೊಳ್ಳಲ್ಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ವಿಜ್ಞಾನ ಕೇಂದ್ರದ ಅಧ್ಯಕ್ಷ ವಿಶ್ವನಾಥ್ ವಹಿಸಲಿದ್ದಾರೆ.