ಬೃಹತ್ ಆರೋಗ್ಯ ತಪಾಸಣೆ ಶಿಬಿರ
ಶಿರಾ: ರಾಜ್ಯ ಸರ್ಕಾರಿ ನೌಕರರ ಸಂಘ ಶಿರಾ ಘಟಕ ವತಿಯಿಂದ ಜೂ. 23 ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಶ್ರೀ ರಂಗನಾಥ ಪ.ಪೂ. ಕಾಲೇಜು ಆವರಣದಲ್ಲಿ ಆಯೋಜಿಸಿದ್ದು ಸದರಿ ಶಿಬಿರದಲ್ಲಿ ಸಚಿವ ಟಿ.ಬಿ.ಜಯಚಂದ್ರ ಉದ್ಘಾಟಿಸುವರು. ಶಿಬಿರದಲ್ಲಿ ಎಲ್ಲಾ ರೀತಿಯ ಕ್ಯಾನ್ಸರ್, ಮೂತ್ರ ಪಿಂಡ, ದಂತ, ಮದುಮೇಹ, ರಕ್ತದ ಒತ್ತಡ, ರೋಗಗಳನ್ನು ಉಚಿತವಾಗಿ ತಪಾಸಣೆ ಮಾಡಲಾಗುವುದು ಹಾಗೂ ರಕ್ತದಾನ ಶಿಬಿರವನ್ನು ಏರ್ಪಡಿಸಿದ್ದು ಸಾರ್ವಜನಿಕರು ಸದರಿ ಆರೋಗ್ಯ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಬಿ.ಸಿ.ಎಂ., ಆರ್.ಅನಂತರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.