ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಹುಳಿಯಾರಿನಲ್ಲಿ 20 ರಿಂದ ನ್ಯಾಫೆಡ್ ಪ್ರಾರಂಭ

Rashmi Kasaragodu
Updated On : 17 Jun 2013, 11:53 am

ಹುಳಿಯಾರು: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ  ಜೂ.20ರ ಗುರುವಾರದಿಂದ ನ್ಯಾಫೆಡ್ ಕೊಬ್ಬರಿ ಖರೀದಿ ಕೇಂದ್ರ ಪ್ರಾರಂಭಗೊಳ್ಳಲಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಉತ್ತಮ ಗುಣಮಟ್ಟದ ಕೊಬ್ಬರಿಯನ್ನು ಖರೀದಿಸಲು ಸರ್ಕಾರ ಮುಂದಾಗಿದ್ದು, ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಬೆಂಬಲ ಬೆಲೆ 5500 ರು. ಮತ್ತು ಸಹಾಯಧನ 1000 ರು. ನಂತೆ ಖರೀದಿ ನಡೆಯಲಿದೆ.  ನಫೆಡ್ ಕೇಂದ್ರಕ್ಕೆ ಕೊಬ್ಬರಿ ಮಾರುವವರು ಪಹಣಿ ಮತ್ತು ತೋಟಗಾರಿಕೆ ಇಲಾಖೆಯಿಂದ ಪಡೆದ ದಾಸ್ತಾನು ಇಳುವರಿ ದೃಢೀಕರಣ ಪತ್ರ ಹಾಜರು ಪಡಿಸಿ, ದಾಸ್ತಾನು ತರುವ ದಿನಾಂಕಕ್ಕೆ ಟೋಕನನ್ನು ನಫೆಡ್ ಅಧಿಕಾರಿಗಳಿಂದ ಪಡೆಯುಬೇಕಿದೆ. ತಾಲೂಕಿನ ಎಲ್ಲಾ ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕೊಬ್ಬರಿಯನ್ನು ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.
ಬ್ಯಾಂಕ್  ಸಾಲ ಮನ್ನಾಕ್ಕೆ ಆಗ್ರಹ
ಶಿರಾ: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರ ಸಾಲಗಳನ್ನು ಮನ್ನಾ ಮಾಡಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದ್ದು, ಇದೇ ರೀತಿಯಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಪಿ.ಎಲ್.ಡಿ.ಬ್ಯಾಂಕಿನ ಎಲ್ಲಾ ವರ್ಗದ ರೈತರ ಸಾಲ ಮನ್ನಾ ಮಾಡುವ ಮೂಲಕ ಆ ವರ್ಗದ ರೈತರ ಸಮಸ್ಯೆಗಳಿಗೂ ಸ್ಪಂದಿಸುವಂತೆ ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಮದ್ದೆವಳ್ಳಿ ರಾಮಕೃಷ್ಣ ಒತ್ತಾಯಿಸಿದ್ದಾರೆ. ಪಟ್ಟಣದ ಪಿ.ಎಲ್.ಡಿ.ಬ್ಯಾಂಕಿನ ಆವರಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಿರಾ ತಾಲೂಕಿನ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ 1945ರಲ್ಲಿ ಆರಂಭಗೊಂಡು ಈವರೆಗೂ ತಾಲೂಕಿನ ರೈತರಿಗೆ ಕಡಿಮೆ ದರದಲ್ಲಿ ಕೃಷಿ ಸಾಲಗಳನ್ನು ನೀಡುತ್ತಾ ಬಂದಿದೆ. ಕಳೆದ 5-6 ವರ್ಷಗಳಿಂದಲೂ ತಾಲೂಕಿನಲ್ಲಿ ಅತೀವ ಬರಗಾಲದ ದೃಷ್ಟಿಯಿಂದ ಸಾಲ ಮಾಡಿದ ಯಾವುದೇ ವರ್ಗದ ರೈತರು ಸಾಲ ತೀರುವಳಿ ಮಾಡಲು ಪರಿತಪಿಸುವಂತಾಗಿದೆ. ಕೆಲವು ರೈತರು ಆತ್ಮಹತ್ಯೆಗೂ ಮುಂದಾಗಿದ್ದು ಮತ್ತು ಕೆಲವು ರೈತರು ಆತ್ಮಹತ್ಯೆ ಮಾಡಿಕೊಂಡ ನಿದರ್ಶನಗಳು ಈ ತಾಲೂಕಿನಲ್ಲಿವೆ ಎಂದು ಅವರು ತಿಳಿಸಿದರು.
ಒಕ್ಕಲಿಗ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ
ತುಮಕೂರು ಜಿಲ್ಲಾ ಒಕ್ಕಲಿಗ ನೌಕರರ ವೇದಿಕೆ ವತಿಯಿಂದ 2012-13 ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯೂಸಿಯಲ್ಲಿ ಶೇ. 85 ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಏರ್ಪಡಿಸಿದೆ. ಹೆಚ್ಚಿನ ಮಾಹಿತಿಗೆ 9448178503, 9740773661 ಸಂಪರ್ಕಿಸುವಂತೆ ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement