v
ಪಾವಗಡ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ವತಿಯಿಂದ 2013-14ನೇ ಸಾಲಿನ ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರವನ್ನು ಜೂನ್ 20ರಂದು ಬೆಳಿಗ್ಗೆ 10ಗಂಟೆಗೆ ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಇಒ ಬಿ.ಪಿ. ನಾಗರಾಜಪ್ಪ ತಿಳಿಸಿದ್ದಾರೆ. ಈ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಜೂನ್ 20ರಂದು ಬೆಳಿಗ್ಗೆ 10ಗಂಟೆಗೆ ಶಾಸಕರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿರುವ ವೈದ್ಯಕೀಯ ತಪಾಸಣಾ ಶಿಬಿರದ ಉದ್ಘಾಟನೆ ಕಾರ್ಯಕ್ರಮವನ್ನು ಶಾಸಕ ಕೆ.ಎಂ ತಿಮ್ಮರಾಯಪ್ಪ ನೆರೆವೇರಿಸಲಿದ್ದಾರೆ. ಪ್ರಸಕ್ತ ಸಾಲಿನ ಅಗತ್ಯವುಳ್ಳ ಮಕ್ಕಳು ವೈದ್ಯಕೀಯ ತಪಾಸಣಾ ಶಿಬಿರಕ್ಕೆ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳುವಂತೆ ಅವರು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ(ಬಿಆರ್ಸಿ) ಧನಂಜಯ ಮುಂತಾದವರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.