ಇಂದಿನಿಂದ ವಿಶೇಷ ಪೂಜೆ
ತುಮಕೂರು: ಇಲ್ಲಿನ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಜೂ. 19 ರಿಂದ 21 ರವರೆಗೆ 3 ದಿವಸಗಳ ಕಾಲ 9ನೇ ವರ್ಷದ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ನಡೆಯಲಿದೆ. ಈ ಸಂದರ್ಭ ಸ್ವಾಮಿಗೆ ವಜ್ರ ಕಿರೀಟ ಹಾಗೂ ವಜ್ರ ಶಂಕ ಚಕ್ರ ವಿಶೇಷ ಅಲಂಕಾರ ಏರ್ಪಡಿಸಲಾಗಿದೆ ಎಂದು ಅಧ್ಯಕ್ಷ ಡಿ.ಎಸ್. ಕುಮಾರ್ ತಿಳಿಸಿದ್ದಾರೆ