ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸಹಕಾರಿ ಸಂಸ್ಥೆ ಸೇವಾ ಮನೋಭಾವ ರೂಡಿಸಿಕೊಳ್ಳಬೇಕು: ಶಾಸಕ ಷಡಕ್ಷರಿ

Mainashree
Updated On : 20 Jun 2013, 11:42 am

ಕ.ಪ್ರ.ವಾರ್ತೆ  ತಿಪಟೂರು  ಜೂ. 20
ಸಹಕಾರಿ ಸಂಸ್ಥೆಗಳು ಲಾಭದ ಮನೋಭಾವನೆಯಿಂದ ಹೊರಬಂದು ಸಾಧ್ಯವಾದಷ್ಟು ಸೇವಾ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕೆಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ನಗರದ ಹಳೇಪಾಳ್ಯ ಬಡಾವಣೆಯಲ್ಲಿ ಶ್ರೀ ಚೌಡೇಶ್ವರಿ ಪತ್ತಿನ ಸಹಕಾರ ಸಂಘ ಹಾಗೂ ಗಾಂಧಿನಗರದ ಶ್ರೀ ಚಾಮುಂಡೇಶ್ವರಿ ಸೌಹಾರ್ದ ಪತ್ತಿನ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳ ಉಚಿತ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸಹಕಾರಿ ಸಂಸ್ಥೆಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡದೇ ಮುಕ್ತ ಆಡಳಿತ ನಡೆಸಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸದಾಗಿ ರಾಷ್ಟ್ರವ್ಯಾಪ್ತಿ ಏಕ ರೂಪದ ಕಾಯ್ದೆ ಜಾರಿಗೊಳಿಸಿದೆ ಎಂದರಲ್ಲದೆ, ಈ ಸಹಕಾರಿ ಸಂಸ್ಥೆಗಳು ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಲೇಖನ ಸಾಮಗ್ರಿಗಳನ್ನು ವಿತರಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಶ್ರೀ ಚೌಡೇಶ್ವರಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್. ಸೋಮಶೇಖರ್ ಮಾತನಾಡಿ ಸಹಕಾರಿ ಸಂಸ್ಥೆಯಲ್ಲಿ ಬರುವ ಲಾಭಾಂಶದ ಸ್ವಲ್ಪ ಹಣವನ್ನು ಪ್ರತಿ ವರ್ಷ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಮೀಸಲಿಡುವುದು ನಮ್ಮ ಉದ್ದೇಶ ಎಂದರು.
ಸಮಾರಂಭದಲ್ಲಿ ಚಾಮುಂಡೇಶ್ವರಿ ಸಂಘದ ಅಧ್ಯಕ್ಷೆ ವಿಶಾಲ, ನಗರಸಭೆ ಸದಸ್ಯ ಟಿ.ಎನ್.ಪ್ರಕಾಶ್, ತಾ.ಕಸಾಪ ಅಧ್ಯಕ್ಷ ಉಜ್ಜಜ್ಜಿ ರಾಜಣ್ಣ, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಶಿವಣ್ಣ, ಪುರಸಭೆ ಮಾಜಿ ಅಧ್ಯಕ್ಷ ಅಣ್ಣಯ್ಯ, ಕಾಂಗ್ರೆಸ್ ಮುಖಂಡ ಎಂ.ಬಿ. ಪರಮಶಿವಯ್ಯ ಮತ್ತಿತರರಿದ್ದರು.
ಈ ಸಂದರ್ಭದಲ್ಲಿ ಹಳೇಪಾಳ್ಯ ಸರ್ಕಾರಿ ಪ್ರೌಢಶಾಲೆ ಹಾಗೂ ಗಾಂಧಿನಗರದ ಆಲ್ ಅಮೀನ್ ಪ್ರೌಢಶಾಲೆಯ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದು ಲಕ್ಷ ಮೌಲ್ಯದ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement