ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ
ತಿಪಟೂರು: ತಾಲೂಕಿನ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2012-13ನೆ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕೂ ಹೆಚ್ಚು ಅಂಕಗಳನ್ನು ಪಡೆದಿರುವ ವೀರಶೈವ ಲಿಂಗಾಯಿತ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದೆಂದು ಸಂಘವು ತಿಳಿಸಿದೆ. ಅರ್ಹ ವಿದ್ಯಾರ್ಥಿಗಳು ಜೂ.30ರೊಳಗೆ ಅಗತ್ಯ ದಾಖಲೆಗಳೊಂದಿಗೆ ಪ್ರಸನ್ನ ಕುಮಾರ್, ಭೌತಶಾಸ್ತ್ರ ಉಪನ್ಯಾಸಕರು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೊ.9482679699 ಸಂಪರ್ಕಿಸಬಹುದು.