ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಬಯಲು ಸೀಮೆ ಸಾಂಸ್ಕೃತಿಕ ಸಂಘ ವಾರ್ಷಿಕೋತ್ಸವ

Mainashree
Updated On : 21 Jun 2013, 11:41 am

ತಿಪಟೂರು: ಬಯಲು ಸೀಮೆ ಸಾಂಸ್ಕೃತಿಕ ಸಂಘದ 11ನೇ ವಾರ್ಷಿಕೋತ್ಸವ ಸಮಾರಂಭ, ಸನ್ಮಾನ, ವಿಶೇಷಾಂಕ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಗರದ ಸತ್ಯಗಣಪತಿ ಅಮೃತ ಮಹೋತ್ಸವ ಭವನದಲ್ಲಿ ಜೂ.22 ಸಂಜೆ 6ಗಂಟೆಗೆ ಏರ್ಪಡಿಸಲಾಗಿದೆ. ಉದ್ಘಾಟನೆಯನ್ನು ಶಾಸಕ ಕೆ.ಷಡಕ್ಷರಿ ನೆರವೇರಿಸಲಿದ್ದು, ಅಧ್ಯಕ್ಷತೆ ಸಂಘದ ಗೌರವಾಧ್ಯಕ್ಷರು ಹಾಗೂ ಪತ್ರಕರ್ತರಾದ ಜಿ.ಇಂದ್ರಕುಮಾರ್ ವಹಿಸಲಿದ್ದಾರೆ. ಪತ್ರಕರ್ತ ಮಾಲತೇಶ್ ಅರಸ್ ವಿಶೇಷಾಂಕ ಬಿಡುಗಡೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಬಿ.ನಂಜಮಾರಿ, ಬಿ.ಸಿ.ನಾಗೇಶ್, ಲೀಡ್‌ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಜಯರಾಮ್, ಪೌರಾಯುಕ್ತ ಎಚ್.ಜಿ.ಚಂದ್ರಶೇಖರ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾ.ಅಧ್ಯಕ್ಷ ಕೆ.ಎಂ.ರಾಜಣ್ಣ ಮತ್ತಿತರರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸನ್ಮಾನ ಸಮಾರಂಭ ಹಾಗೂ ಸುಗಮ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಸಿ.ನಾಗರಾಜು, ಉಪಾಧ್ಯಕ್ಷೆ ಗೌರಮ್ಮ,ಪ್ರ.ಕಾರ್ಯದರ್ಶಿ ಎನ್.ಬಾನುಪ್ರಶಾಂತ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement