ಶಾಸಕ ಕೆ.ಎನ್.ರಾಜಣ್ಣ ಭೇಟಿ ನೀಡಿ ಪರಿಶೀಲನೆ
ಕ.ಪ್ರ.ವಾರ್ತೆ ಮಧುಗಿರಿ ಜೂ. 23
ತಾಲೂಕಿನಲ್ಲಿ ಅಂತರ್ಜಲ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆ ಹಾಗೂ ಜಿ.ಪಂ. ವತಿಯಿಂದ ಕೆಲವು ಕೆರೆಗಳಿಗೆ ಪೂರಕ ಕಾಲುವೆ ಮೂಲಕ ನೀರು ಹರಿಸುವ ಕಾಮಗಾರಿ ಕೈಗೊಳ್ಳಲು ಶಾಸಕ ಕೆ.ಎನ್.ರಾಜಣ್ಣ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.
ತಾಲೂಕಿನ ದೊಡ್ಡಮಾಲೂರು ಕೆರೆಗೆ ಪೂರಕ ಕಾಲುವೆ ಮೂಲಕ ಜೀವ ನದಿ ಜಯಮಂಗಲಿ ನದಿಯಿಂದ ನೀರು ತುಂಬಿಸುವ ಸದುದ್ದೇಶದಿಂದ ಈ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಈಚೆಗೆ ನಡೆದಿದ್ದ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದರು.
ಅದರಂತೆ ಮುಚ್ಚಿ ಹೋಗಿರುವ ಪೂರಕ ಕಾಲುವೆಗಳನ್ನು ಪುನಶ್ಚೇತನಗೊಳಿಸಿ ಅಂತರ್ಜಲ ವೃದ್ಧಿಪಡಿಸಲು
ಮತ್ತು ನೀರು ಸರಾಗವಾಗಿ ಹರಿಯುವಂತಾಗಲು ಕಾಮಗಾರಿ ನಡೆದಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮಳೆಗಾಲ ಆರಂಭಕ್ಕೂ ಮುನ್ನ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ರಾಜಣ್ಣ ಸೂಚಿಸಿದರು.