ಇಂದು ಜಿಲ್ಲಾ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ
ತುಮಕೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ತುಮಕೂರು ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪರಿಸರ ಮಿತ್ರ ಶಾಲಾ ಪ್ರಶಸ್ತಿ 2012-13, ಟಿ.ಆರ್. ಅನಂತರಾಮು ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭ, ತುಮಕೂರು ಜಿಲ್ಲಾ ಅರಣ್ಯ, ಪರಿಸರ, ಜೀವಿ ವೈವಿದ್ಯ ಪರಿಸ್ಥಿತಿ ವರದಿ - 2012 ಬಿಡುಗಡೆ ಸಮಾರಂಭವನ್ನು ಮಾ. 2 ರಂದು ಬೆಳಗ್ಗೆ 10-30ಕ್ಕೆ ಸಿದ್ದಗಂಗಾ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾರಂಭವನ್ನು ಜಿಪಂ ಸಿಇಓ ಗೋವಿಂದರಾಜು ಉದ್ಘಾಟಿಸಲಿದ್ದಾರೆ. ಜಿಲ್ಲಾ ಪರಿಸರ ಪರಿಸ್ಥಿತಿ ವರದಿಯನ್ನು ಖ್ಯಾತ ವಿಜ್ಞಾನ ಸಾಹಿತಿ ಟಿ.ಆರ್. ಅನಂತರಾಮು ಬಿಡುಗಡೆ ಮಾಡಲಿದ್ದಾರೆ. ಪುಸ್ತಕ ಬಿಡುಗಡೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ. ವೆಂಕಟೇಶ್, ಪರಿಸರ ಮಿತ್ರ ಶಾಲಾ ಪ್ರಶಸ್ತಿ ವಿತರಣೆಯನ್ನು ಸಿ.ಎಂ. ಸತೀಶ್, ಟಿ.ಆರ್. ಅನಂತರಾಮು ಪರಿಸರ ಪ್ರಶಸ್ತಿಯನ್ನು ರಾಜ್ಯ ವಿಜ್ಞಾನ ಪರಿಷತ್ ಅಧ್ಯಕ್ಷ ಡಾ.ಎಚ್.ಎಸ್. ನಿರಂಜನಾರಾಧ್ಯ ವಿತರಿಸಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.