ಎಚ್ಡಿಕೆ ವಿರುದ್ಧ ಕಪ್ಪುಬಾವುಟ ಪ್ರದರ್ಶನಕ್ಕೆ ನಿರ್ಧಾರ
ಮದ್ದೂರು: ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಗಡಿಭಾಗ ನಿಡಘಟ್ಟದಲ್ಲಿ ಕಪ್ಪು ಬಾವುಟ ಪ್ರದರ್ಶಿಸಲು ಜೆಡಿಎಸ್ ತಾಲೂಕು ಕಾರ್ಯಕರ್ತರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಪಕ್ಷದ ತಾಲೂಕು ಅಧ್ಯಕ್ಷ ಅಜ್ಜಹಳ್ಳಿ ರಾಮಕೃಷ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ತಮ್ಮಣ್ಣ ಅವರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮ ಬಹಿಷ್ಕರಿಸುವುದರ ಜತೆಗೆ ಕುಮಾರಸ್ವಾಮಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ತೀರ್ಮಾನಿಸಲಾಯಿತು.
ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಮಾಜಿ ಶಾಸಕ ತಮ್ಮಣ್ಣ ಅವರ ಅಣತಿಯಂತೆ “¸’ ಫಾರಂ ವಿತರಣೆ ಮಾಡಲಾಗಿದೆ. ವರಿಷ್ಠರ ಇಂತಹ ನಿರ್ಧಾರ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ಹುನ್ನಾರ ಎಂದು ಕಲ್ಪನಾ ಬೆಂಬಲಿಗರು ಟೀಕಿಸಿದರು.
ದಿ. ಎಂ.ಎಸ್. ಸಿದ್ದರಾಜು ಸ್ಥಾಪಿಸಿದ್ದ ಸ್ವಾಭಿಮಾನಿ ಪಡೆ ನೇತೃತ್ವದಲ್ಲಿ ಮುಂದಿನ ಹೋರಾಟ ರೂಪಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.