ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ದುಡಿಮೆ ಉತ್ಸಾಹದಲ್ಲಿ ಆಯಾಸ ಕಾಣುವುದಿಲ್ಲ: ಡಾ.ವೀರೇಂದ್ರ ಹೆಗ್ಗಡೆ ಅಭಿಮತ

Parashurama
Updated On : 1 Mar 2013, 10:39 am

ತಿಪಟೂರು: ವ್ಯಕ್ತಿ ತಾನು ಮಾಡುವ ಕೆಲಸದಲ್ಲಿ ಶ್ರದ್ಧೆ, ಉತ್ಸಾಹವಿದ್ದರೆ ಆಯಾಸವೆನಿಸುವುದಿಲ್ಲ. ಆ ನಿಟ್ಟಿನಲ್ಲಿ ಯುವ ಪೀಳಿಗೆ ಜಾಗೃತರಾಗಬೇಕೆಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಶ್ರೀ ವೀರೇಂದ್ರ ಹೆಗ್ಗಡೆ ಅವರು ತಿಳಿಸಿದರು.  ನಗರದ ಕಲ್ಪತರು ವಿದ್ಯಾಸಂಸ್ಥೆಯ ಸುವರ್ಣ ಮತ್ತು ತಾಂತ್ರಿಕ ಮಹಾವಿದ್ಯಾಲಯದ ರಜತ ಮಹೋತ್ಸವದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಹಾಗೂ ಬಾಲಕಿಯರ ನೂತನ ವಸತಿ ಗೃಹದ ಉದ್ಘಾಟನೆ ನೆರವೇರಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಸಂಸ್ಥೆಯ ಬಗ್ಗೆ ಹರ್ಷ ವ್ಯಕ್ತಪಡಿಸುತ್ತಾ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುತ್ತಾ ದೇಶದ ಬದಲಾವಣೆ ನಿಟ್ಟಿನಲ್ಲಿ ಸಾಗುತ್ತಿವೆ. ಹಿಂದಿನ ಶಿಕ್ಷಣ ಮತ್ತು ಇಂದಿನ ಶಿಕ್ಷಣ ಪದ್ಧತಿಯಿಂದ ಸಾಕಷ್ಟು ಬದಲಾವಣೆಯನ್ನು ಕಾಣಬಹುದಾಗಿದ್ದು, ಪಲ್ಲಾಗಟ್ಟಿ ಅಡವಪ್ಪನವರಂತಹ ವ್ಯಕ್ತಿಗಳಂತಾಗಲು ಯತ್ನಿಸಿ ಶ್ರದ್ಧೆ, ಸತ್ಯ, ಆಸಕ್ತಿ ಜೊತೆಗೆ ನಮ್ಮ ಸಂಸ್ಕೃತಿಗೆ ಅಪಚಾರವಾಗದಂತೆ ನಡೆದುಕೊಳ್ಳುವಂತೆ ಅಧ್ಯಾಪಕರುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತಿಳಿಸಿದರು.  ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಜಿಲ್ಲೆಯಲ್ಲಿ ಪ್ರಾರಂಭವಾದ ಎರಡು ವರ್ಷಗಳಲ್ಲಿ 28ಸಾವಿರ ಸ್ವ-ಸಹಾಯ ಸಂಘ ರಚಿಸಿ 2,85,000 ಸದಸ್ಯರನ್ನು ಹೊಂದಿದೆ. 310 ಕೋಟಿ ಸಾಲವನ್ನು ನೀಡಿ, ಉದ್ಯೋಗಸ್ಥರನ್ನಾಗಿಸುವ ಯತ್ನ ನಡೆಸಿದೆ ಎಂದರು. ಇದೇ ರೀತಿ ಸಾಲ ಪಡೆದವರು ಸ್ವಯಂ ಪ್ರೇರಿತರಾಗಿ ಸಾಲ ಮರುಪಾವತಿಯಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದರು. ಇಂದಿನ ಸಿನಿಮಾಗಳಲ್ಲಿ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ಸಂಬಂಧ ಕೆಡಿಸುವಂತಹ ಚಿತ್ರಗಳು ಬಿತ್ತರವಾಗುತ್ತಿರುವುದು ವಿಷಾದನೀಯ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments