ಬಸ್ ಪಾಸ್ ಅವಧಿ ವಿಸ್ತರಣೆ
ತುಮಕೂರು: ಕ.ರಾ.ರ.ಸಾ.ನಿಗಮದ ವತಿಯಿಂದ ಅಂಗವಿಕಲರಿಗೆ ರಿಯಾಯತಿ ದರದಲ್ಲಿ ವಿತರಿಸಲಾದ ಬಸ್‌ಪಾಸ್‌ಗಳ ಅವಧಿಯನ್ನು ಮಾ. 31 ರವರೆಗೆ ವಿಸ್ತರಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಬಸ್ ಪಾಸ್ ಫಲಾನುಭವಿಗಳು ಹಾಲಿ ಇರುವ ಪಾಸ್‌ನಲ್ಲಿಯೇ ಮಾ. 31 ರವರೆಗೆ ಮುಂದಿನ ಆದೇಶ ನೀಡುವವರೆಗೆ ಪ್ರಯಾಣಿಸಬಹುದಾಗಿದೆ ಹಾಗೂ ಈ ಬಗ್ಗೆ ಈಗಾಗಲೇ ಕ.ರಾ.ರ.ಸಾ. ನಿಗಮ ಎಲ್ಲಾ ಚಾಲನಾ ಸಿಬ್ಬಂದಿಗಳ ಹಾಗೂ ಬಸ್ ನಿಲ್ದಾಣಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.
ಅನಧಿಕೃತ ರಸ್ತೆ ವ್ಯಾಪಾರ ತೆರವುಗೊಳಿಸಲು ಮನವಿ: ತುಮಕೂರು ನಗರಸಭೆ ವ್ಯಾಪ್ತಿಯ ಮುಖ್ಯ ರಸ್ತೆಗಳ ಎರಡೂ ಬದಿಯಲ್ಲಿ ಅನಧಿಕೃತವಾಗಿ ಬಿಡಾರ, ಶೆಡ್, ತಳ್ಳುವ ಗಾಡಿಗಳ ಮೂಲಕ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರು 3 ದಿನದೊಳಗಾಗಿ ಸ್ವಯಂ ಪ್ರೇರಣೆಯಿಂದ ವ್ಯಾಪಾರವನ್ನು ತೆರವುಗೊಳಿಸಬೇಕು. ತಪ್ಪಿದ್ದಲ್ಲಿ ನಗರಸಭೆ ಸಿಬ್ಬಂದಿ ವತಿಯಿಂದ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.