ಬಸ್- ಕಾರು ಡಿಕ್ಕಿ: ಕಾರಿನ ಚಾಲಕ ಸ್ಥಳದಲ್ಲೇ ಸಾವು
ಗುಬ್ಬಿ: ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ನಡುವೆ ನಡೆದ ಡಿಕ್ಕಿಯಿಂದ ಕಾರಿನ ಚಾಲಕ ಮಹಮದ್ ಹಯಾಸ್ (38) ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಗುಬ್ಬಿ ತಾಲೂಕಿನ ಬಾಗೂರು ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಭಾನುವಾರ ಅಪಘಾತ ಸಂಭವಿಸಿದೆ. ತಾಯಿ ಹಾಗೂ ತನ್ನಿಬ್ಬರ ಮಕ್ಕಳೊಂದಿಗೆ ಅರಸೀಕೆರೆಯ ಸಂಬಂಧಿಕರ ವಿವಾಹಕ್ಕೆಂದು ತುಮಕೂರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾನೆ. ಮೃತನ ತಾಯಿ ಶಾನು (55) ತೀವ್ರಗಾಯಗೊಂಡಿದ್ದು ಮಕ್ಕಳಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಸಿಪಿಐ ಕುಮಾರಪ್ಪ, ಪಿಎಸ್ಐ ಮುನಿರಾಜು ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಿಲಿಸಿಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.