ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸುರಕ್ಷತೆ, ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಿ: ಸಫೀರ್ ಅಹ್ಮದ್

Rashmi Kasaragodu
Updated On : 6 Mar 2013, 12:19 pm

ಕ.ಪ್ರ. ವಾರ್ತೆ  ತುಮಕೂರು  ಮಾ.5
ಸುರಕ್ಷತೆ ಮತ್ತು ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ಕಾರ್ಖಾನೆ ಮತ್ತು ಬಾಯ್ಲರ್‌ಗಳ ಇಲಾಖೆಯ ಮೈಸೂರಿನ ಸಹಾಯಕ ನಿರ್ದೇಶಕ ಸಫೀರ್ ಅಹ್ಮದ್ ಮಹಿಳಾ ಕಾರ್ಮಿಕರಿಗೆ ಕರೆ ನೀಡಿದರು.
ಭೀಮಸಂದ್ರ ಬಳಿ ಇರುವ ಶಾಹಿ ಎಕ್ಸ್‌ಪೋರ್ಟ್ ಗಾರ್ಮೆಂಟ್ಸ್ ಕಾರ್ಖಾನೆ ಕಾರ್ಮಿಕರಿಗೆ ಹಮ್ಮಿಕೊಂಡಿದ್ದ ಮಹಿಳಾ ಕಾರ್ಮಿಕರ ಸುರಕ್ಷತೆ ಮತ್ತು ವಿವಿಧ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಖಾನೆಗಳಲ್ಲಿ ಕೆಲಸ ಮಾಡುವಾಗ ಸುರಕ್ಷತೆ ಬಗ್ಗೆ ಗಮನಹರಿಸದೇ ಇದ್ದರೆ ದೈಹಿಕ ಅಂಗವಿಕಲತೆ ಹೊಂದುವ ಸಾಧ್ಯತೆಗಳಿರುತ್ತವೆ. ಅದೇ ರೀತಿ ಆರೋಗ್ಯದ ಕಡೆಯೂ ಗಮನಹರಿಸಬೇಕು. ಉಟೋಪಚಾರದ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ರೋಗ ರುಜಿನುಗಳು ಬರುತ್ತವೆ. ಇದು ಇಡೀ ಕುಟುಂಬದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತದೆ ಎಂದರು.
ಸಾಕಷ್ಟು ಸುಧಾರಣೆ: ತುಮಕೂರು ಸಾಂತ್ವನ ಕೇಂದ್ರದ ಕಾರ್ಯದರ್ಶಿ ಹಾಗೂ ವಕೀಲ ಸಾ.ಚಿ. ರಾಜಕುಮಾರ್ ಮಾತನಾಡಿ ಹಲವು ಸಾಮಾಜಿಕ ಕಾನೂನುಗಳ ಜಾರಿಯಿಂದಾಗಿ ಸಮಾಜದಲ್ಲಿ ಸಾಕಷ್ಟು ಸುಧಾರಣೆಗಳಾಗಿವೆ ಎಂದರು.
ಭಾರತ ಸಂವಿಧಾನದ 17ನೇ ಅನುಚ್ಛೇದದಲ್ಲಿ ಪ್ರಸ್ತಾಪಿತವಾಗಿರುವ ಅಸ್ಪೃಶ್ಯತೆ ನಿರ್ಮೂಲನೆ ಸಾಕಾರಗೊಳಿಸಲು 1955 ರಲ್ಲಿ ನಾಗರಿಕ ಹಕ್ಕುಗಳ ಸಂರಕ್ಷಣಾ ಅಧಿನಿಯಮ 1989 ರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಅಧಿನಿಯಮ ಜಾರಿಗೆ ಬಂದವು ಎಂದು ತಿಳಿಸಿದರು.
ಪ್ರಸ್ತುತ ಅಸ್ಪೃಶ್ಯತೆ ಪರಿಕಲ್ಪನೆ ಸಮಾಜದಲ್ಲಿ ಸಾಕಷ್ಟು ಬದಲಾವಣೆ ಹೊಂದಿದೆ. ಇಂತಹ ಬದಲಾವಣೆಗೆ ಇತರೆ ಸಮಸ್ಯೆಗಳೂ ಒಗ್ಗಿಕೊಳ್ಳಬೇಕು. ಆಗ ಮಾತ್ರ ಉತ್ತಮ ನಾಗರಿಕ ಸಮಾಜವನ್ನು ನಿರೀಕ್ಷಿಸಲು ಸಾಧ್ಯ ಎಂದರು. ವರದಕ್ಷಿಣೆ, ಹೆಣು ಭ್ರೂಣ ಹತ್ಯೆ, ಲಂಚ ಮತ್ತಿತರ ಸಾಮಾಜಿಕ ಅನಿಷ್ಟಗಳು ಮನುಷ್ಯನ ಮಾನಸಿಕ ಪರಿವರ್ತನೆಯಿಂದ ಬದಲಾಗದ ಹೊರೆತು ಕೇವಲ ಕಾನೂನುಗಳಿಂದಲೇ ನಿರ್ಮೂಲನೆಯಾಗಲಾರವು. ಕೊಳ್ಳುಬಾಕ ಸಂಸ್ಕೃತಿಯಿಂದ ಹೊರ ಬಂದರೆ ಮನುಷ್ಯ ಮನುಷ್ಯನನ್ನಾಗಿ ನೋಡಿದರೆ ಇವುಗಳಿಗೆ ಪರಿಹಾರ ಸಾಧ್ಯ ಎಂದರು.
ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿ ಮಂಜುಳ ಅವರು ನಿಗಮದಿಂದ ಸಿಗುವ ಸಾಲಸೌಲಭ್ಯಗಳ ಬಗ್ಗೆ ವಿವರಿಸಿದರು. ಶಾಹಿ ಎಕ್ಸ್‌ಪೋರ್ಟ್‌ನ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಲಕ್ಷ್ಮಣ್ ಅಧ್ಯಕ್ಷತೆ ವಹಿಸಿದ್ದರು. ಶಿವಕುಮಾರ್, ಪ್ರಸಾದ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement