ಆರ್. ನಾಗೇಂದ್ರಯ್ಯ (ನಿಧನ)
ಬೆಂಗಳೂರಿನ ರಾಜಾಜಿನಗರ ನಿವಾಸಿ ಆರ್. ನಾಗೇಂದ್ರಯ್ಯ (89) ಬುಧವಾರ ಸಂಜೆ ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ, ಪುತ್ರಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರ ಗುರುವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.