ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸ್ವ ಸಹಾಯ ಸಂಘ ತರಬೇತಿ

Rashmi Kasaragodu
Updated On : 7 Mar 2013, 12:24 pm

ತುಮಕೂರಿನ ಶಾಂತಿನಗರದಲ್ಲಿರುವ ಸ್ನೇಹಾದ್ರಿ ಸ್ವಸಹಾಯ ಸಂಘದ ವತಿಯಿಂದ ಸ್ತ್ರೀಶಕ್ತಿ ಸ್ವ ಸಹಾಯ ಸಂಘಗಳ ಸದಸ್ಯರಿಗೆ ಆರ್ಥಿಕ ಸ್ವಾವಲಂಬನೆ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಮಾ. 9 ರಂದು ಬೆಳಗ್ಗೆ 10 ಗಂಟೆಗೆ ರವೀಂದ್ರ ಕಲಾನಿಕೇತನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಾಗಾರವನ್ನು ಜಿಪಂ ಸಿಇಓ ಗೋವಿಂದರಾಜು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಚಿ.ನಿ. ಪುರುಷೋತ್ತಮ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್‌ಬಿಎಂ ಮುಖ್ಯ ವ್ಯವಸ್ಥಾಪಕ ಶಿವಕುಮಾರ್, ತಾಪಂ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶಯ್ಯ ಪಾಲ್ಗೊಳ್ಳಲ್ಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಸಾಮಾಜಿಕ ಅಭಿವೃದ್ಧಿ ಸಲಹೆಗಾರ ಸಿ.ಸಿ. ಪಾವಟೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಕುಮಾರಸ್ವಾಮಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ತುಮಕೂರಿನ ಲವಕುಮಾರ್ ಪಾಲ್ಗೊಳ್ಳಲ್ಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ಆರ್.ಕೆ. ರಾಜು ಪ್ರಮಾಣ ಪತ್ರ ವಿತರಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement