ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿ ಬಿದ್ದು ಸಾವು
ಕ.ಪ್ರ. ವಾರ್ತೆ ಪಾವಗಡ ಮಾ. 7
ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಬೈಕಿನಿಂದ ಬಿದ್ದು ಸ್ಥಳದಲ್ಲಿಯೆ ಮೃತಪಟ್ಟ ಘಟನೆ ಕೃಷಗಿರಿ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿ ವಿಜಯಕುಮಾರ್ (28) ಎಂದು ಗುರುತಿಸಲಾಗಿದೆ. ಮುಖಂಡರೊಬ್ಬರ ಜೀಪು ಡ್ರೈವರ್ರಾಗಿ ಕೆಲಸ ಮಾಡುತ್ತಿದ್ದ ವಿಜಯಕುಮಾರ್ ಇತ್ತೀಚೆಗೆ ಕೆಲಸ ಬಿಟ್ಟು ಸ್ವಂತ ಕೆಲಸದಲ್ಲಿ ನಿರತರಾಗಿದ್ದರು ಎನ್ನಲಾಗಿದ್ದು ಬುಧವಾರ ರಾತ್ರಿ ಕೃಷಗಿರಿ ಮಾರ್ಗವಾಗಿ ಬೈಕಿನಲ್ಲಿ ಹೋಗುತ್ತಿರುವಾಗ ಬೈಕಿನಿಂದ ಬಿದ್ದ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ. ರಸ್ತೆ ಮಾರ್ಗವಾಗಿ ಓಡಾಡುತ್ತಿರುವ ಗ್ರಾಮಸ್ಥರು ಘಟನೆ ನೋಡಿ ಕೂಡಲೇ ಠಾಣೆಗೆ ಸುದ್ದಿ ಮುಟ್ಟಿಸಿದ್ದು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಶವವನ್ನು ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಶವ ಪರೀಕ್ಷೆ ಮಾಡಲಾಗಿದೆ. ಈ ಕುರಿತು ಪಿಎಸ್ಐ ರಾಮಕೃಷಪ್ಪ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.