ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಮಧುಗಿರಿ ಪುರಸಭೆ: ಶೇ.81

Rashmi Kasaragodu
Updated On : 9 Mar 2013, 12:05 pm

ಮಧುಗಿರಿ: ಇಲ್ಲಿನ ಪುರಸಭೆಯ ಎಲ್ಲ 23 ವಾರ್ಡ್‌ಗಳಲ್ಲೂ ಶಾಂತಿಯುತ ಹಾಗೂ ಬಿರುಸಿನ ಮತದಾನ ನಡೆದು ಶೇ.81.96 ರಷ್ಟು ದಾಖಲಾಗಿದೆ.
   ಬೆಳಿಗ್ಗೆಯಿಂದಲೇ ಉತ್ಸಾಹದಿಂದ ಮತದಾರರು ಮತಗಟ್ಟೆಗೆ ಬಂದು ಮತ ಚಲಾಯಿಸುವ ದೃಶ್ಯ ಎಲ್ಲ ವಾರ್ಡ್‌ಗಳಲ್ಲೂ ಕಂಡುಬಂತು. ಪಟ್ಟಣದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದೇ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಶಾಂತಿಯುತವಾಗಿ ಮತದಾನ ನಡೆಯಿತು.
  ಮಾಜಿ ಶಾಸಕ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷೆ ಕೆ.ಎನ್.ರಾಜಣ 14 ನೇ  ಮತಗಟ್ಟೆ  ಆಗಮಿಸಿ ಮತ ಹಾಕುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು.
ಶಾಲಾ ಸುವರ ಮಹೋತ್ಸವ
ಮಧುಗಿರಿ: ತಾಲೂಕಿನ ದೊಡ್ಡೇರಿ ಹೋಬಳಿ ರಂಟವಳಲು ಕ್ಲಸ್ಟರ್‌ಮಟ್ಟದ ವಿಠಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಮಾ.9ರಂದು ಶನಿವಾರ ಸಂಜೆ 4 ಗಂಟೆಗೆ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ಶಾಲಾ ಸುವರ್ಣ ಮಹೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಗಂಗಾಧರ್ ತಿಳಿಸಿದ್ದಾರೆ.
   ಅಂದು ಸಂಜೆ 5ಕ್ಕೆ ಸಿರಿಗೆಜ್ಜೆ ಕಲಾ ತಂಡ ಮಧುಗಿರಿ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ, 6ಕ್ಕೆ ತುಮಕೂರಿನ ಸೆವೆನ್ ಸ್ಟಾರ್ ಆರ್ಕೆಸ್ಟ್ರಾ ಅವರಿಂದ ಮನರಂಜನಾ ಕಾರ್ಯಕ್ರಮ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಡಾ. ಶ್ರೀಶಿವಾನಂದ ಶಿವಾಚಾರ್ಯಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಖ್ಯಾತ ಕವಿ ಕವಿತಾಕೃಷ್ಣ, ಗ್ರಾ.ಪಂ. ಅಧ್ಯಕ್ಷ ಕೆ.ಎಲ್. ಕೃಷ್ಣಮೂರ್ತಿ, ಜಿ.ಪಂ. ಮಾಜಿ ಅಧ್ಯಕ್ಷ ಜಿ.ಜೆ. ರಾಜಣ್ಣ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಕುನ್ನಪ್ಪ, ಸಹಾಯಕ ಕಾರ್ಯದರ್ಶಿ ಬೆಂಗಳೂರು ನಗರ ಜಿ.ಪಂ.ನ ಡಾ. ಕೆ.ವಿ. ದೇವರಾಜು, ಕಾರ್ಮಿಕ ಮುಖಂಡ ರಂಗಧಾಮಪ್ಪ ಆಗಮಿಸುವರು. ವಿಶೇಷ ಆಹ್ವಾನಿತರಾಗಿ ಕಿರುತೆರೆ ಕಲಾವಿದ ಹರ್ಷವರ್ಧನ, ಕಾವ್ಯಶ್ರೀ, ಆದರ್ಶ ಹೆಗ್ಗಡೆ, ಪರೀಕ್ಷಿತ್ ಇನ್ನು ಅನೇಖರು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಗಂಗಾಧರ್ ಕೋರಿದ್ದಾರೆ.
ದ್ವಿತೀಯ ಪಿ.ಯು.ಸಿ. ಪರೀಕ್ಷೆ
ತುಮಕೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 13 ರಿಂದ ಮಾರ್ಚ್ 28 ರವರೆಗೆ ತುಮಕೂರು ಜಿಲ್ಲೆಯಾದ್ಯಂತ ಒಟ್ಟು 39 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಬಾರಿ ಒಟ್ಟು 27,765 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement