ಈಶ್ವರಪ್ಪ, ಡೀವಿ ನನ್ನ ಆಯ್ಕೆ: ಸೊಗಡು
ಕ.ಪ್ರ.ವಾರ್ತೆ ್ಣ ತುಮಕೂರು ್ಣ ಮಾರ್ಚ್ 9
ಈಶ್ವರಪ್ಪ ಅಥವಾ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರಲ್ಲಿ ಯಾರಾದರೂ ಪಕ್ಷದ ರಾಜ್ಯಾಧ್ಯಕ್ಷರಾದರೆ ಒಳಿತು. ಇದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೊಗಡು ಶಿವಣ್ಣ ತಿಳಿಸಿದರು.
ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇವರಿಬ್ಬರೂ ಹಿರಿಯರು, ಅನುಭವಿಗಳಾಗಿದ್ದಾರೆ. ಪಕ್ಷವನ್ನು ಕಟ್ಟುವ, ಕಾರ್ಯಕರ್ತರನ್ನು ಸಂಘಟಿಸುವ ಶಕ್ತಿ ಹೊಂದಿದ್ದಾರೆ. ಪಕ್ಷದ ರಾಷ್ಟ್ರೀಯ ಮುಖಂಡ ಅರುಣ್ ಜೇಟ್ಲಿಗೆ ಪಕ್ಷದ ಅಧ್ಯಕ್ಷರ ಆಯ್ಕೆ ಜವಾಬ್ದಾರಿ ವಹಿಸಲಾಗಿದೆ ಎಂದರು. ತಾವು ಬಿಜೆಪಿ ರಾಜ್ಯಾಧ್ಯಕ್ಷರಾಗಲು ಸಾಧ್ಯವಿಲ್ಲ. ನಾಲ್ಕು ಸಾರಿ ಗೆದ್ದಿರಬಹುದು. ಆದರೆ ಶಕ್ತಿ ಸಾಲದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ನಾವು ಅನ್ನೋದು ಬಿಜೆಪಿ ಸಿದ್ಧಾಂತ. ನಾನು ಅನ್ನೋದು ಅಲ್ಲ ಎಂದರು.