ಇಂದು ವಿದ್ಯಾರ್ಥಿಗಳಿಗೆ ತಿಳಿವಳಿಕೆ ಕಾರ್ಯಕ್ರಮ
ತಿಪಟೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ ಕ್ರಾಸ್ ಘಟಕದ ವತಿಯಿಂದ ರಾಜ್ಯ ಅಗ್ನಿ ಶಾಮಕ ಸೇವಾ ಅಣುಕು ಪ್ರದರ್ಶನ ಮತ್ತು ಬೆಂಕಿ ಆಕಸ್ಮಿಕಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿವಳಿಕೆ ಕಾರ್ಯಕ್ರಮವನ್ನು ಗುರುವಾರ ಬೆಳಿಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ ಎಂದು ಕಾರ್ಯಕ್ರಮಾಧಿಕಾರಿ ಪ್ರೊ. ಈರಯ್ಯ ತಿಳಿಸಿದ್ದಾರೆ.
ಉದ್ಘಾಟನೆಯನ್ನು ಪ್ರಾಂಶುಪಾಲರಾದ ಡಾ.ಜಯದೇವಪ್ಪ ನೆರವೇರಿಸಲಿದ್ದು, ಅಗ್ನಿಶಾಮಕ ರಕ್ಷಣಾಧಿಕಾರಿಗಳಾದ ಕೆ.ಆರ್. ಗಂಗಾಧರಯ್ಯ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರೊ. ರಾಮಚಂದ್ರ ಮತ್ತಿತರರು ಭಾಗವಹಿಸಲಿದ್ದಾರೆ.