ಇಂದು ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟ
ತುಮಕೂರು: ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಶ್ರೀದೇವಿ ಪಾಲಿಟೆಕ್ನಿಕ್ ಸಹಯೋಗದಲ್ಲಿ ಮಾರ್ಚ್ 16 ರ ಶನಿವಾರ ಬೆಳಿಗ್ಗೆ 9 ಗಂಟೆಗೆ 36ನೇ ರಾಜ್ಯ ಮಟ್ಟದ ಅಂತರಪಾಲಿಟೆಕ್ನಿಕ್ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ಶ್ರೀದೇವಿ ಪಾಲಿಟೆಕ್ನಿಕ್ ಆವರಣದಲ್ಲಿ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸೊಗಡು ಶಿವಣ್ಣ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯರು ಹಾಗೂ ಟ್ರಸ್ಟಿನ ಧರ್ಮದರ್ಶಿ ಡಾ. ಎಂ.ಆರ್. ಹುಲಿನಾಯ್ಕರ್ ಅಧ್ಯಕ್ಷತೆ ವಹಿಸುವರು. ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ ಅವರು ಕ್ರೀಡಾಧ್ವಜಾರೋಹಣ ನೆರವೇರಿಸುವರು. ಶಾಸಕ ಡಾ. ಜಿ. ಪರಮೇಶ್ವರ್ ಅವರು ಕ್ರೀಡಾಜ್ಯೋತಿ ಬೆಳಗುವರು. ಶಾಸಕಿ ಅನಿತಾಕುಮಾರಸ್ವಾಮಿ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ವಿಶೇಷ ಆಹ್ವಾನಿತರಾಗಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಜಿಲ್ಲಾಧಿಕಾರಿ ಆರ್.ಕೆ. ರಾಜು ಭಾಗವಹಿಸುವರು.