ಬ್ಲಾಕ್ ಕಾಂಗ್ರೆಸ್ ಕಮಿಟಿ ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ
ಪಾವಗಡ: ತಾಲೂಕು ಬ್ಲಾಕ್ ಕಾಂಗ್ರೆಸ್ ಕಮಿಟಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಯುವ ಮುಖಂಡ ಬೊಮ್ಮತನಹಳ್ಳಿ ತಿಪ್ಪೇಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಪಕ್ಷದ ನೂತನ ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಪಕ್ಷದ ತಾಲೂಕು ಅಧ್ಯಕ್ಷ ಸುದೇಶ್ಬಾಬು ಹಾಗೂ ತಾಲೂಕು ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಎಚ್.ವಿ. ವೆಂಕಟೇಶ್ ನೇತೃತ್ವದಲ್ಲಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಜಾರಿ ಮಾಡಿದೆ ಎಂದರು. ಮುಂದೆ ಪಕ್ಷದ ಪ್ರಬಲ ಸಂಘಟನೆಗೆ ಶ್ರಮಿಸುವುದಾಗಿ ತಿಳಿಸಿದ ಅವರು ಎಚ್.ವಿ. ವೆಂಕಟೇಶ್ ಹಾಗೂ ಸುದೇಶ್ಬಾಬು, ಪಕ್ಷದ ತಾಲೂಕು ಕಮಿಟಿಗೆ ಕೃತಜ್ಞತೆ ಸಲ್ಲಿಸಿರುವುದಾಗಿ ತಿಳಿಸಿದರು.