ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಅಕ್ರಮ ಮರಳು ಸಾಗಾಣಿಕೆ: 4 ವಾಹನಗಳ ವಶ

Parashurama
Updated On : 19 Mar 2013, 10:21 am

ತುರುವೇಕೆರೆ: ತಾಲೂಕಿನ ವಿವಿಧ ನದಿ ತಟಗಳಿಂದ ಅಕ್ರಮವಾಗಿ ಮರಳನ್ನು ಸಂಗ್ರಹಿಸಿ ರಾಜ್ಯದ ವಿವಿಧೆಡೆ ಸರಬರಾಜು ಮಾಡಲಾಗುತ್ತಿದ್ದ ನಾಲ್ಕು ಲಾರಿಗಳನ್ನು ಸ್ಥಳೀಯ ಕಂದಾಯ ಇಲಾಖಾ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಪತ್ತೆಯಾಗಿ ವಶಕ್ಕೆ ತೆಗೆದು ಕೊಳ್ಳಲಾಗಿದೆ.
ಕಳೆದ ಎರಡು ದಿನಗಳ ಹಿಂದೆಯಷ್ಟೆ ಲಾರಿಯೊಂದರಲ್ಲಿ ಅಕ್ರಮವಾಗಿ ಮರಳನ್ನು ಸಾಗಣೆ ಮಾಡಲಾಗುತ್ತಿದೆ ಎಂದು ಬಂದ ಖಚಿತ ವರ್ತಮಾನದ ಮೇರೆಗೆ ತಹಸೀಲ್ದಾರ್ ಜೆ.ಪಿ. ಮಂಜೇಗೌಡ ಮತ್ತು ಸಿಬ್ಬಂದಿ ದಾಳಿ ಮಾಡಲಾಗಿ ಅಕ್ರಮ ಬಯಲಿಗೆ ಬಂದಿತ್ತು. ಕೂಡಲೇ ಲಾರಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಮಂಗಳವಾರ ಬೆಳಗ್ಗೆಯೇ ಮೂರು ಲಾರಿಗಳಲ್ಲಿ ಮರಳು ಸಾಗಣೆ ಮಾಡುತ್ತಿರುವ ಸುಳಿವು ಪಡೆದ
ತಹಸೀಲ್ದಾರ್ ಮಂಜೇಗೌಡ ಹಾಗೂ ಕಂದಾಯ ಇಲಾಖಾ ಅಧಿಕಾರಿಗಳು ಹಾಗೂ ಇನ್ಸ್ ಪೆಕ್ಟರ್ ತಿರುಮಲಯ್ಯನವರ ಸಿಬ್ಬಂದಿ ತಾಲೂಕಿನ ಅಂಬಲದೇವರಹಳ್ಳಿ ಗೇಟ್ ಬಳಿ ತಪಾಸಣೆ ಮಾಡಲು ಮುಂದಾಗಿದ್ದರು. ದಾಳಿಯ ಸುಳಿವು ಪಡೆದ ಲಾರಿಯ ಚಾಲಕರು ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಆದರೆ ಕ್ಲೀನರ್ ಮಾತ್ರ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದರೆಂದು ತಿಳಿದುಬಂದಿದೆ. ಸದ್ಯ ಪೊಲೀಸ್ ಸ್ಟೇಷನ್ ಆವರಣದಲ್ಲಿ ಲಾರಿಗಳನ್ನು ನಿಲ್ಲಿಸಲಾಗಿದೆ.
 ಎಲ್ಲಾ ವಾಹನಗಳ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ವಾಹನದ ಮಾಲೀಕರ ಮಾಹಿತಿ ಸಂಗ್ರಹಣೆ ಮಾಡಲು ಸೂಚನೆ ನೀಡಲಾಗಿದೆ ಎಂದು ತಹಸೀಲ್ದಾರ್ ಜೆ. ಪಿ. ಮಂಜೇಗೌಡ ಪತ್ರಕರ್ತರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments