ತೆಂಗಿನ ಮರಹತ್ತುವ ಸಾಧನ ಪ್ರಾತ್ಯಕ್ಷಿಕೆ ತರಬೇತಿ ಸಮಾರೋಪ
ಕ.ಪ್ರ.ವಾರ್ತೆ ್ಣ ತಿಪಟೂರು ್ಣ ಮಾ. 19
ತಾಲೂಕಿನ ಬಿದರೆಗುಡಿ ಕಾವಲಿನಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಭಿವೃದ್ಧಿ ಮಂಡಳಿ ಬೆಂಗಳೂರು ಪ್ರಾಯೋಜಿತ ಒಂದು ವಾರದ ತೆಂಗಿನ ಮರ ಹತ್ತುವ ಸಾಧನ ಪ್ರಾತ್ಯಕ್ಷಿಕೆ ಮತ್ತು ಸಸ್ಯ ಸಂರಕ್ಷಣೆ ಕುರಿತು ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿತ್ತು.
ಇದು ಕೌಶಲ್ಯ ಅಭಿವೃದ್ಧಿಯ ಒಂದು ವಾರದ ತರಬೇತಿ ಕಾರ್ಯಕ್ರಮವಾಗಿದ್ದು, ಮುಕ್ತಾಯ ಸಮಾರಂಭದಲ್ಲಿ ತರಬೇತಿ ಪಡೆದ 40 ರೈತರಿಗೆ ಪ್ರಮಾಣ ಪತ್ರ ಮತ್ತು ಮರ ಹತ್ತುವ ಸಾಧನ ಹಾಗೂ ವಿಜೇತರಿಗೆ ನಗದು ಬಹುಮಾನವನ್ನು ಕೊಟ್ಟು ಗೌರವಿಸಲಾಯಿತು. ಜೊತೆಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ರೈತರಿಗೆ ರಾಗಿ ಮಾಲ್ಟ್ ಮತ್ತು ತೆಂಗಿನಕಾಯಿ ಎಣ್ಣೆಯನ್ನು ವಿತರಿಸಲಾಯಿತು.
ಕೇಂದ್ರದ ವಿಜ್ಞಾನಿಗಳಾದ ಎಂ.ಎಚ್.ಶಂಕರ, ಕೊನೇಹಳ್ಳಿ ಕೃಷಿ ಸಂಶೋಧನಾ ಕೇಂದ್ರದ ಕ್ಷೇತ್ರಾಧೀಕ್ಷಕ ಡಾ.ಕೆ.ಬಿ.ಪಾಲಣ್ಣ ಮತ್ತು ಗೋಪಾಲನಹಳ್ಳಿ ಗ್ರಾಮದ ಪ್ರಗತಿಪರ ರೈತರಾದ ರಘು ಸೇರಿದಂತೆ 40ಕ್ಕೂ ಹೆಚ್ಚು ರೈತರು ಪಾಲ್ಗೊಂಡಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.