ನಾಳೆಯಿಂದ ಶಂಕರೇಶ್ವರಸ್ವಾಮಿ ಜಾತ್ರಾ ಮಹೋತ್ಸವ
ತಿಪಟೂರು: ತಾಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರದಲ್ಲಿ ಶ್ರೀ ಶಂಕರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಯವರ ನೇತೃತ್ವದಲ್ಲಿ ಮಾ.21ರಿಂದ 28ರವರೆಗೆ ನಡೆಯಲಿದೆ.
ಮಾ.21ರಂದು ಗಣಪತಿ ಪೂಜೆ,ಅಂಕುರಾರ್ಪಣೆ, ಧ್ವಜಾರೋಹಣ, ಮಾ.22ರಂದು ವೃಷಭವಾಹನ, ಸರ್ಪವಾಹನ, ಮಾ.23ರಂದು ನಂದೀಶ ವಾಹನ, ಪಕ್ಷಿವಾಹನ, ಮಾ.24ರಂದು ಅಶ್ವವಾಹನ, ಗಿರಿಜಾ ಕಲ್ಯಾಣ, ಗಜವಾಹನೋತ್ಸವ, ಮಾ.25ರಂದು ಶ್ರೀ ಶಂಕರೇಶ್ವರಸ್ವಾಮಿಯವರ ರಥೋತ್ಸವವು ವಿವಿಧ ಜಾನಪದ ಕಲಾತಂಡಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು, ಅಂದೇ ರಾತ್ರಿ 9.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಮಾ.26ರಂದು ಬೆಳ್ಳಿ ಪಾಲಕಿ ಉತ್ಸವ ಹಾಗೂ ಅಗ್ಗುಂದ ರಾಜ್ಕಮಲ್ ಫೈರ್ ವರ್ಕ್ಸ್ ಇವರಿಂದ ಮದ್ದಿನ ಪ್ರದರ್ಶನ ಏರ್ಪಡಿಸಲಾಗಿದೆ. ಮಾ.27ರಂದು ಉಪ್ಪರಿಗೆ ಉತ್ಸವ, ತೀರ್ಥಸ್ನಾನ, ಭೂತ ವಾಹನ, ಮಾ.28ರಂದು ಬಿಲ್ವವೃಕ್ಷೋತ್ಸವ ಮತಿತ್ತರ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.
ಈ ಜಾತ್ರಾ ಮಹೋತ್ಸವಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಸ್ವಾಮಿಯವರ ಕೃಪೆಗೆ ಪಾತ್ರರಾಗಬೇಕೆಂದು ಸುಕ್ಷೇತ್ರಾಧ್ಯಕ್ಷರಾದ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.