ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆ

Parashurama
Updated On : 21 Mar 2013, 11:02 am

ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿಂದು ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ತತ್ವಸಿದ್ಧಾಂತಗಳನ್ನು ಒಪ್ಪಿ ಜೆಡಿಎಸ್  ತೊರೆದು ಬಿಜೆಪಿ ಸೇರಿರುವುದಾಗಿ ಅಗಸರಹಳ್ಳಿ ಗ್ರಾಮಪಂಚಾಯ್ತಿ ಸದಸ್ಯ ಶಶಿಧರ್ ನುಡಿದರು.
ಗುರುವಾರ ಬಿಜೆಪಿ ಕಚೇರಿಯಲ್ಲಿ ಚುನಾವಣಾ ಪೂರ್ವಸಿದ್ಧತಾ ಸಭೆಯನಂತರ ಬಿಜೆಪಿಗೆ ಸೇರ್ಪಡೆಯಾದ ಶಶಿಧರ್ ಅವರು, ಇದುವರೆಗೂ ನಾನು ಜೆಡಿಎಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆಸಲ್ಲಿಸಿದರೂ ಆ ಪಕ್ಷದಲ್ಲಿ ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸುವ ಮನೋಭಾವನೆಯಿಲ್ಲ. ಯಾವುದೇ ಸಮಸ್ಯೆಗಳು ಎದುರಾದರೆ ಕಾರ್ಯಕರ್ತರೇ ತಮ್ಮ ಸ್ವಂತಶಕ್ತಿಯಿಂದ ಪರಿಹರಿಸಿಕೊಳ್ಳ ಬೇಕು. ಇತ್ತೀಚೆಗೆ ನಮ್ಮ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಅನ್ಯ ಪಕ್ಷದ ಕಾರ್ಯಕರ್ತರ ಕಿರುಕುಳ ಹೆಚ್ಚಾಗಿದ್ದು, ಅವರ ಕಿರುಕುಳ ಮತ್ತು ಸಮಸ್ಯೆಗಳಿಗೆ  ಜಿಪಂ ಸದಸ್ಯರಾದ ಎಚ್.ಬಿ.ಪಂಚಾಕ್ಷರಿಯವರು  ಸ್ಪಂದಿಸುತ್ತಿರುವುದರಿಂದ ಅವರ ಜೊತೆಯಲ್ಲಿ ನಾನು ಬೆಜೆಪಿಗೆ ಇಂದು ವಿದ್ಯುಕ್ತವಾಗಿ ಸೇರ್ಪಡೆಯಾಗಿದ್ದೇನೆ ಎಂದರು.  ಇದಲ್ಲದೆ ಇನ್ನು ಹಲವಾರು ಜನ ಶೆಟ್ಟೀಕೆರೆ ಹೋಬಳಿಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಅವರು ಈ ಸಂದರ್ಭದಲ್ಲಿ ನುಡಿದರು.
 ಅಸರಹಳ್ಳಿ ಶಶಿಧರ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಪಕ್ಷದ ಮುಖಂಡರಾದ ಕೆ.ಎಸ್. ಕಿರಣ್‌ಕುಮಾರ್ ಮಾತನಾಡಿ ನಮ್ಮ ಪಕ್ಷದಲ್ಲಿ ಯಾವತ್ತು ಕಾರ್ಯಕರ್ತರ ನೋವಿಗೆ ಸ್ಪಂದಿಸುತ್ತೇವೆ. ಏನೇ ತೊಂದರೆಯಿರಲಿ ಅವರನ್ನು ನಮ್ಮ ಕಣ್ಣಿನಂತೆ ಕಾಪಾಡುತ್ತೇವೆ. ಈ ನಿಟ್ಟಿನಲ್ಲಿ ಯಾವುದೇ ಆತಂಕ ಬೇಡ ಎಂದರು. ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷ ಎಂ.ಎಂ. ಜಗದೀಶ್, ತಾಲೂಕು ಬಿಜೆಪಿ ಅಧ್ಯಕ್ಷ ಮಿಲಿಟರಿ ಶಿವಣ್ಣ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments