ನಗರಸಭಾ ಸದಸ್ಯರಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ಕ.ಪ್ರ. ವಾರ್ತೆ ್ಣ ತಿಪಟೂರು ್ಣ ಮಾ.21
ನಗರದಲ್ಲಿ ಉಲ್ಬಣವಾಗುತ್ತಿರುವ ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ, ಸ್ವಚ್ಛತೆಗೆ ಸಂಬಂಧಿಸಿದಂತೆ ಸಮಸ್ಯೆಗಳಿಗೆ ಕ್ರಮ ಕೈಗೊಳ್ಳಬೇಕೆಂದು ನಗರಕ್ಕೆ ಭೇಟಿ ನೀಡಿದ್ದ ನೂತನ ಜಿಲ್ಲಾಧಿಕಾರಿಗಳಾದ ಅನುರಾಗ್ ತಿವಾರಿಯವರಿಗೆ ನಗರಸಭೆ ಸದಸ್ಯರು ಮನವಿ ಮಾಡಿದರು.
ಉಪವಿಭಾಗಾಧಿಕಾರಿ ಕಚೇರಿಗೆ ನೂತನ ಜಿಲ್ಲಾಧಿಕಾರಿ ಭೇಟಿ ನೀಡಿದ ಸಂದರ್ಭದಲ್ಲಿ ಮನವಿ ನೀಡಿದ ಅವರು, ಈಚನೂರು ಕೆರೆಯಲ್ಲಿ ನೀರು ಖಾಲಿಯಾಗಿದ್ದು, ನಗರದಾದ್ಯಂತ ನೀರಿನ ಸಮಸ್ಯೆ ತಲೆದೊರಿದ್ದು, ತುರ್ತಾಗಿ ಬೋರ್ವೆಲ್ ಕೊರೆಸಲು ಅನುದಾನ ನೀಡಬೇಕೆಂದು ಮನವಿ ಮಾಡಿದರು. ನಗರದ ಕೆಲವು ಪ್ರದೇಶಗಳನ್ನು ಖಾಸಗಿ ಗುತ್ತಿಗೆದಾರರಿಗೆ ಗುತ್ತಿಗೆ ನೀಡಲಾಗಿದ್ದು, ಹಾಲಿ ಗುತ್ತಿಗೆದಾರರು ಮತ್ತು ಕಾರ್ಮಿಕರ ಹೊಂದಾಣಿಕೆ ಕೊರತೆಯಿಂದಾಗಿ ಸ್ವಚ್ಛತಾ ಕಾರ್ಯ ಸ್ಥಗಿತಗೊಂಡಿದ್ದರ ಪರಿಣಾಮ ಮಲೇರಿಯಾ, ಕಾಲರದಂತಹ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ. ಆದ್ದರಿಂದ ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಗರಸಭಾ ಸದಸ್ಯರಾದ ಲಿಂಗರಾಜು, ರಾಜಶೇಖರ್, ನಿಜಗುಣ, ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.